ಜನಪರ ಬಜೆಟ್ ಮಂಡಿಸಿದ ಸಿಎಂ: ಸಂಜಯ ಪಾಟೀಲ
ಬೆಳಗಾವಿ: ಕುಡಿಯುವ ನೀರು, ರಸ್ತೆ, ಕೃಷಿ, ವೈದ್ಯಕೀಯ ಕ್ಷೇತ್ರ, ಶೈಕ್ಷಣಿಕ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲಾ ವಿಭಾಗಗಳಿಗೆ ಹಾಗೂ ಸರ್ವ ಜನಾಂಗಕ್ಕೆ ಸಮತೋಲನ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ರಾಜ್ಯ ಪ್ರಗತಿಗೆ ಪೂರಕವಾದ ಬಜೆಟ್ ಎಂದು ಬೆಳಗಾವಿ ಗ್ರಾ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು.
ಶಕ್ರವಾರ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರಾದ ಬಸವರಾಜ ಬೊಮ್ಮಾಯಿ ಮಂಡಿಸಿದ 2022 - 23ನೇ ಸಾಲಿನ ಆಯವ್ಯಯದ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಬಜೆಟ್ ವಿಶೇಷವಾಗಿ ಕರಾವಳಿ ಭಾಗದಲ್ಲಿ ಆಳ ಸಮುದ್ರ ಮೀನುಗಾರಿಕೆ ದೋಣಿಗಳಿಗೆ ಮತ್ಸ್ಯಸಿರಿ ಯೋಜನೆ, ಮೀನುಗಾರರಿಗೆ ವಸತಿ ಘೋಷಣೆ, ಪ್ರವಾಹ ನಿಯಂತ್ರಣ ಹಾಗೂ ಉಪ್ಪುನೀರು ತಡೆಗಟ್ಟಲು ಖಾರ್ ಲ್ಯಾಂಡ್ ಯೋಜನೆಗೆ ಅನುದಾನ ಘೋಷಣೆ, ನಾರಾಯಣ ಗುರುಗಳ ಸ್ಮರಣಾರ್ಥ ವಸತಿ ಶಾಲೆ ಘೋಷಣೆ, ರೈತರಿಗೆ ಕೃಷಿಯಲ್ಲಿ ಯಂತ್ರೋಪಕರಣ ಬಳಕೆಗೆ ಇಂಧನ ವೆಚ್ಚ ಭಾರ ಕಡಿಮೆ ಮಾಡಲು "ರೈತ ಶಕ್ತಿ" ಯೋಜನೆ, ಗ್ರಾಮೀಣ ಭಾಗದ ರೈತರಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ "ಯಶಸ್ವಿನಿ" ಯೋಜನೆ, ಪೌರ ಕಾರ್ಮಿಕರಿಗೆ ಸಂಕಷ್ಟ ಪರಿಹಾರ ಭತ್ಯೆ, ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ, ಅಕ್ಷರ ದಾಸೋಹ ಯೋಜನೆಯ ಬಿಸಿಯೂಟ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ ಹೆಚ್ಚಳ ಮಾಡಿರುವುದು, ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಹೆಚ್ಚಿಸಿರುವುದು ಜನತೆಯ ಆಶೋತ್ತರಗಳಿಗೆ ಸ್ಪಂದಿಸಿದ ಆಯವ್ಯಯ ಇದಾಗಿದೆ ಎಂದರು