Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಶಾಸಕರ ನಿಧಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ, ದೇವಸ್ಥಾನ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು*

localview news

ಬೆಳಗಾವಿ :ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯ ವತಿಯಿಂದ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಚಾಲನೆಯನ್ನು ನೀಡಿದರು.

ಜೊತೆಗೆ, ಗ್ರಾಮದ ಶ್ರೀ ಲಕ್ಷ್ಮೀ ಮಂದಿರದ ಅಭಿವೃದ್ಧಿಯ ಸಲುವಾಗಿ ಶಾಸಕರ ಅನುದಾನದ ವತಿಯಿಂದ 7 ಲಕ್ಷ ರೂ,ಗಳ ಚೆಕ್ ನ್ನು ದೇವಸ್ಥಾನದ ಕಮೀಟಿಯವರಿಗೆ ಹಸ್ತಾಂತರಿಸಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಮನೋಹರ ಬೆಳಗಾಂವ್ಕರ್, ಯಲ್ಲಪ್ಪ ಬೆಳಗಾಂವ್ಕರ್, ಪುಂಡಲೀಕ ಜಾಧವ್, ಮನೋಹರ ಪಾಟೀಲ, ನಾಮದೇವ ಮೋರೆ, ಮಹೇಶ ಪಾಟೀಲ, ಗ್ರಾಮದ ಜನರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ನಂತರ, ಬೆಳವಟ್ಟಿ ಗ್ರಾಮದ ರಸ್ತೆಗಳ ಅಭಿವೃದ್ಧಿಯ ಸಲುವಾಗಿ ಶಾಸಕರ ಅನುದಾನದ ವತಿಯಿಂದ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಸಹ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಮನೋಹರ ಬೆಳಗಾಂವ್ಕರ್, ನಾರಾಯಣ ನಾಲವಡೆ, ಮಾರುತಿ ಕಾಂಬಳೆ, ಲಕ್ಷ್ಮಣ ಪಾಟೀಲ, ಜ್ಞಾನೇಶ್ವರ ಸುತಾರ, ರಾಮಲಿಂಗ ಪಾಟೀಲ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.