Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಉತ್ತರ ಪ್ರದೇಶದಲ್ಲಿ ಇತಿಹಾಸ ಬರೆದ ಯೋಗಿ ಸಾರಿಥ್ಯದ ಬಿಜೆಪಿ

localview news

ಉತ್ತರ ಪ್ರದೇಶ :ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ, ಆಡಳಿತಾರೂಢ ಭಾರತೀಯ ಜನತಾ ಪಕ್ಷವು ಉತ್ತರ ಪ್ರದೇಶದಲ್ಲಿ 30 ಸ್ಥಾನಗಳನ್ನು ಗೆದ್ದು 220 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ.

ಸಮಾಜವಾದಿ ಪಕ್ಷ 3 ಸ್ಥಾನಗಳನ್ನು ಗೆದ್ದು 113 ಸ್ಥಾನಗಳಲ್ಲಿ ಮುಂದಿದೆ. ಹೀನಾಯ ಪ್ರದರ್ಶನ ತೋರಿದ ಕಾಂಗ್ರೆಸ್ ಒಂದರಲ್ಲಿ ಗೆದ್ದು ಮತ್ತೊಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

1985ರ ನಂತರ ರಾಜ್ಯದಲ್ಲಿ ಆಡಳಿತ ಪಕ್ಷವೊಂದು ಮತ್ತೆ ಅಧಿಕಾರಕ್ಕೆ ಬರುತ್ತಿರುವುದು ಇದೇ ಮೊದಲು. ಯೋಗಿ ಆದಿತ್ಯನಾಥ್ ಅವರು ಸಂಪೂರ್ಣ ಐದು ವರ್ಷಗಳ ಅವಧಿಯನ್ನು ಪೂರೈಸಿದ ನಂತರ ಮತ್ತೆ ಅಧಿಕಾರಕ್ಕೆ ಬಂದ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಲಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ತನ್ನ ಕಾರ್ಯಾಲಯದಲ್ಲಿ ವಿಜೋಯೋತ್ಸವ ಕಾರ್ಯಕ್ರಮ ಆಚರಿಸಿದೆ.