Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

2 ಕೋಟಿ ರೂ,ಗಳ ವೆಚ್ಚದ 3 ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

localview news

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ 3 ಪ್ರಮುಖ ರಸ್ತೆ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಪೂಜೆ ನೆರವೇರಿಸಿ ಚಾಲನೆ ನೀಡಿದರು. ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 2 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಪೂಜೆ ನಡೆಯಿತು.

ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಮೊದಗಾ ಗ್ರಾಮಕ್ಕೆ 1 ಕೋಟಿ ರೂ., ಹೊನ್ನಿಹಾಳ ಗ್ರಾಮಕ್ಕೆ 50 ಲಕ್ಷ ರೂ. ಹಾಗೂ ಬಾಳೇಕುಂದ್ರಿ ಕೆ ಎಚ್ ಗ್ರಾಮಕ್ಕೆ 50 ಲಕ್ಷ ರೂ,ಗಳು ಬಿಡುಗಡೆಯಾಗಿದ್ದು, ಕಾಂಕ್ರೀಟ್ ರಸ್ತೆಗಳು ನಿರ್ಮಾಣವಾಗಲಿವೆ.

ಈ ಸಂದರ್ಭದಲ್ಲಿ ತೇಜು ಮಾರಿಹಾಳ, ಸುಭಾಷ್ ಪಾಟೀಲ, ಪ್ರಕಾಶ ಕಡ್ಯಾಗೋಳ, ಶಿವಾನಂದ ಪಾಟೀಲ, ಬಸವರಾಜ ಕಲ್ಲೂರ, ಕಲ್ಲಪ್ಪ ರಾಮಚನ್ನವರ, ನಿಲೇಶ್ ಚಂದಗಡ್ಕರ್, ಶಹಬಾಜ್, ವಿಠ್ಠಲ ಪಾಟೀಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.