ಶಾಲೆಯಲ್ಲಿ ಹಿಜಾಬ್ ಧರಿಸುವಂತಿಲ್ಲ ಸರಕಾರದ ಅದೇಶ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು:ಸರಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್ ಶಾಲೆಯಲ್ಲಿ ಸಮವಸ್ತ್ರ ಕಡ್ಡಾಯ ಎಂದು ತೀರ್ಪು ನೀಡುವುದರ ಮೂಲಕ ಹಿಜಾಬ್ ವಿಚಾರಕ್ಕೆ ತೆರೆ ಏಳೆದಿದೆ.
ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂದ ಹೈಕೋರ್ಟ್ ವಿದ್ಯಾರ್ಥಿನಿಯರು ತರಗತಿಗಳಲ್ಲಿ ಹಿಜಾಬ್ ಧರಿಸುವುದಿಲ್ಲ. ಶಾಲೆಯಲ್ಲಿ ಎಲ್ಲರೂ ಸರಿಯಾಗಿ ಸಮವಸ್ತ್ರ ಧರಿಸಬೇಕು ಎಂದು ಹೈಕೋರ್ಟ್ ಸರಕಾರದ ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ.
ಸಮವಸ್ತ್ರದ ಸಂಹಿತೆ ಎಲ್ಲರೂ ಪಾಲಿಸಬೇಕು. ರಾಜ್ಯ ಸರಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಎರಡೇ ವಾಕ್ಯದಲ್ಲಿ ಹೈಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ.