Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಹೋಳಿ ಹಬ್ಬ ಹಿನ್ನೆಲೆ ಎರಡೂ ದಿನ ಸಿಗೋಲ್ಲ ಮದ್ಯ

localview news

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮಾರ್ಚ್ 17 ರಂದು ರಾತ್ರಿ ಕಾಮದಹನ ಹಾಗೂ ಮಾರ್ಚ್ 18 ರಂದು ಹೋಳಿ ಹಬ್ಬದ ಅಚರಣೆ ನಿಮಿತ್ಯ, ಬೆಳಗಾವಿ ನಗರ ಮತ್ತು ಬೆಳಗಾವಿ ತಾಲೂಕಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.

ಮಾರ್ಚ್ 17 ರಂದು ಮಧ್ಯಾಹ್ನ 2 ಗಂಟೆಯಿAದ ಮಾರ್ಚ್ 18 ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟದ ಅಂಗಡಿಗಳು, ಬಾರ್/ರೆಸ್ಟೋರೆಂಟ್ ಗಳು, ಕ್ಲಬ್ ಗಳು ಹಾಗೂ ದಾಸ್ತಾನು ಡಿಪೋಗಳನ್ನು, ಹೊಟೇಲ್ ಗಳಲ್ಲಿರುವ ಬಾರ್ ಗಳನ್ನು ಮುಚ್ಚತಕ್ಕದ್ದು ಹಾಗೂ ಎಲ್ಲ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಹಾಕಬೇಕು.

ಪರಿಸ್ಥಿತಿ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್ ಪೆಕ್ಟರ್ ಹಾಗೂ ಉಪ-ವಿಭಾಗದ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(2) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 31 ರ ಪ್ರಕಾರ ಅವಶ್ಯಕತೆ ಕಂಡುಬoದಲ್ಲಿ ಶಾಂತಿಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು.

ಅಬಕಾರಿ ಉಪ-ಆಯುಕ್ತರು, ಬೆಳಗಾವಿ ತಾಲೂಕು ಮತ್ತು ಉಪ ಪೊಲೀಸ್ ಆಯುಕ್ತರು(ಕಾ ಮತ್ತು ಸು), ಬೆಳಗಾವಿ ನಗರ ಹಾಗೂ ಅವರ ಅಧೀನ ಅಧಿಕಾರಿಗಳು, ಬೆಳಗಾವಿ ಹೆಚ್ಚುವರಿ ಅಬಕಾರಿ ಅಧೀಕ್ಷಕರು ಮತ್ತು ಅಬಕಾರಿ ಉಪ ಅಧೀಕ್ಷಕರು ಇವರುಗಳು ತಮ್ಮ ವ್ಯಾಪ್ತಿಯನ್ನು ಅಧಿಸೂಚನೆಯನ್ನು ಸೂಕ್ತ ರೀತಿಯಲ್ಲಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬAಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ತಿಳಿಸಿದ್ದಾರೆ.