Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಪಂಜಾಬ್ ಚುಕ್ಕಾಣಿ ಹಿಡಿದ ಆಮ್ ಆದ್ಮಿ ಪಾರ್ಟಿ ನಾಯಕ ಭಗವಂತ್ ಮಾನ್

localview news

ಪಂಜಾಬ್ :ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಭಗವಂತ್ ಮಾನ್ ಅವರು ಚಂಡೀಗಢದ ರಾಜ್ಯ ಸಿವಿಲ್ ಸೆಕ್ರೆಟರಿಯೇಟ್‌ನಲ್ಲಿ ಪಂಜಾಬ್‌ನ 18 ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಬೆಂಬಲಿಗರು ಸ್ವಾತಂತ್ರ್ಯ ಹೋರಾಟಗಾರನಿಗೆ ಸಂಬಂಧಿಸಿದ ‘ಬಸಂತಿ’ ಪೇಟ ಮತ್ತು ದುಪಟ್ಟಾಗಳನ್ನು ಧರಿಸಿ ಗಮನ ಸೆಳೆದಿದ್ದಾರೆ.

ಆಪ್ ಪಕ್ಷದ ಚುಕ್ಕಾಣಿ ಹಿಡಿದ ಭಗವಂತ್ ಮಾನ್ ಅವರಿಗೆ ಪ್ರಧಾನಿ ಮೋದಿ ಹಾಗೂ ಅನೇಕ ಗಣ್ಯಾತಿ ಗಣ್ಯರು ಶುಭಾಶಯ ತಿಳಿಸಿದ್ದಾರೆ.