ಹಿಂದೆಂದೂ ಕಾಣದಷ್ಟು ಅಭಿವೃದ್ಧಿ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸನ್ಮಾನಿಸಿದ ರಹವಾಸಿಗಳು
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ ಕೆ ಗ್ರಾಮದ ಟೀಚರ್ಸ್ ಕಾಲೋನಿಯಲ್ಲಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಟೀಚರ್ಸ್ ಕಾಲೋನಿ ರಹವಾಸಿಗರ ಸಂಘವನ್ನು ಸಹ ಲಕ್ಷ್ಮಿ ಹೆಬ್ಬಾಳಕರ್ ಉದ್ಘಾಟಿಸಿದರು. ಕ್ಷೇತ್ರದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವ ಹಿನ್ನೆಲೆಯಲ್ಲಿ ಕಂಗ್ರಾಳಿ ಬಿ ಕೆ ಗ್ರಾಮದ ಟೀಚರ್ಸ್ ಕಾಲೋನಿ ರಹವಾಸಿಗಳು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಸನ್ಮಾನಿಸಿದರು.
ಅಭಿವೃದ್ಧಿ ಪರ ಶಾಸಕರು ನಮಗೆ ಸಿಕ್ಕಿರುವುದು ನಮ್ಮ ಸುದೈವ. ಇನ್ನಷ್ಟು ಅಭಿವೃದ್ಧಿ ಮಾಡುವ ಶಕ್ತಿಯನ್ನು ದೇವರು ನಿಮಗೆ ನೀಡಲಿ ಎಂದು ನಿವಾಸಿಗಳು ಹಾರೈಸಿದರು.