ಬೆಳಗಾವಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಬೆಲೆ ಇಲ್ಲ: ರಾಜಕುಮಾರ
ಬೆಳಗಾವಿ : ಬೆಳಗಾವಿ ತಾಲೂಕಿನಲ್ಲಿ ಬಿಜೆಪಿ ಲಿಂಗಾಯತ ಕಾರ್ಯಕರ್ತರಿಗೆ ಬೆಲೆ ಇಲ್ಲ. ಆದ್ದರಿಂದ ಬಿಜೆಪಿ ತೋರೆದು ಆಪ್ ಪಕ್ಷ ಸೇರ್ಪಡೆಯಾದೆ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ತಿಳಿಸಿದರು.
ಸೋಮವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಶಿಸ್ತಿನ ಸಿಪಾಯಿಯಾಗಿದ್ದ ಪಾಲಿಕೆ ಮಾಜಿ ಸದಸ್ಯ ದೀಪಕ ಜಮಖಂಡಿ ಹಾಗೂ ಬುಡಾ ಮಾಜಿ ಅಧ್ಯಕ್ಷ ಘೂಳಪ್ಪ ಹೊಸಮನಿ ಅವರು ಲಿಂಗಾಯತ ಸಮುದಾಯದ ವ್ಯಕ್ತಿಗಳೆಂದು ಅವರನ್ನು ಉಚ್ಚಾಟನೆ ಮಾಡಿದ್ದು ನನ್ನ ಮನಸಿಗೆ ಘಾಸಿಯಾಗಿತು.
ಅಲ್ಲದೆ, ಬಿಜೆಪಿ ನಗರ ಘಟಕದ ಜಿಲ್ಲಾಧ್ಯಕ್ಷ ಶಶಿಕಾಂತ ಪಾಟೀಲ ತಮ್ಮದೆ ಅಶ್ಲೀಲ ಫೋಟೋ ಹರಿಬಿಟ್ಟು ಪಕ್ಷಕ್ಕೆ ಮುಜುಗರ ತಂದರೂ ಅವರ ಮೇಲೆ ಕ್ರಮ ಕೈಗೊಂಡಿಲ್ಲ ಯಾಕೆ ಎಂದು ಪ್ರಶ್ನಿಸಿದರು.
ಭ್ರಷ್ಟಾಚಾರದ ಪ್ರಕರಣ ಎದುರಿಸುತ್ತಿರುವ ಸ್ಥಳೀಯ ಬಿಜೆಪಿ ಶಾಸಕರು ಸದನದಲ್ಲಿ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತುತ್ತಾರೆ. ಆರೋಪ ಎದುರಿಸುತ್ತಿರುವ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಕ್ಷದಲ್ಲಿ ಯಾವುದೇ ಜಾತಿ, ಭಾಷೆ ಇಲ್ಲ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದೇ ಗುರಿ ಇದೆ. ಅಲ್ಲದೆ, ಉತ್ತರ ಕರ್ನಾಟಕದ ಬಗ್ಗೆ ಕಳಕಳಿ ಇದೆ.
ಮುಂಬರುವ ಚುನಾವಣೆಗಳಲ್ಲಿ ಯುವಕರಿಗೆ ಆದ್ಯತೆ ನೀಡಿ ಆಮ್ ಆದ್ಮಿ ಪಕ್ಷ ಟಿಕೆಟ್ ನೀಡಲಿದೆ ಎಂದರು. ಕೃಷ್ಣಾ ನದಿಯ ಪ್ರವಾಹದಿಂದ ನೊಂದ ಸಂತ್ರಸ್ತರಿಗೆ ಇಲ್ಲಿಯವರೆಗೂ ಪರಿಹಾರ ಸಿಕ್ಕಿಲ್ಲ.
ಚಿಕ್ಕೋಡಿ ತಾಲೂಕಿನಲ್ಲಿ 7956 ಮನೆಗಳ ಸರ್ವೆಯಾಗಿಲ್ಲ. ಸರಕಾರದಿಂದ ಅನುದಾನ ಬಿಡುಗಡೆಯಾದರೂ ಇಲ್ಲಿಯವರೆಗೂ ಅರ್ಹ ಸಂತ್ರಸ್ತರಿಗೆ ಪರಿಹಾರ ತಲುಪಿಸಲು ಸರಕಾರ ಸಂಪೂರ್ಣ ವಿಫಲವಾಗಿದೆ. ಅಲ್ಲದೆ, ನೆರೆ ಹಾವಳಿಯಿಂದ ಬೆಳೆಗಳು ಸಂಪೂರ್ಣ ನಾಶವಾಗಿ ರೈತಾಪಿ ಕುಟುಂಬ ಬಿದಿಗೆ ಬಂದರೂ ಅವರ ಗೋಳು ಕೇಳುವವರಿಲ್ಲ. ಶೀಘ್ರದಲ್ಲೇ ಚಿಕ್ಕೋಡಿಯ ಐದು ತಾಲೂಕಿನ ಸಂತ್ರಸ್ತರಿಗೆ ಪರಿಹಾರ ಕೊಡದಿದ್ದರೇ ಆಪ್ ಹೋರಾಟ ನಡೆಸಲಾಗುವುದು ಎಂದರು.
ಪಾಲಿಕೆ ಚುನಾವಣೆ ಮುಗಿದು ಆರು ತಿಂಗಳು ಕಳೆದರೂ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕಾರ ಮಾಡಿಲ್ಲ. ಅಲ್ಲದೆ ಮೇಯರ್, ಉಪಮೇಯರ್ ಆಯ್ಕೆ ನಡೆದಿಲ್ಲ. ಸ್ಥಳೀಯ ಬಿಜೆಪಿ ಶಾಸಕರು ತಮ್ಮ ಪ್ರಭಾವ ಬೆಳೆಸಿ ಆಡಳಿತಾಧಿಕಾರಿಯಿಂದ ಬಜೆಟ್ ಮಂಡಣೆ ಮಾಡಿಸಿ ನೂತನ ಸದಸ್ಯರಿಗೆ ವಂಚನೆ ಮಾಡಲು ಹೋರಟಿದ್ದಾರೆ. ಆದ್ದರಿಂದ ಸರಕಾರ ಮೇಯರ್, ಉಪಮೇಯರ್ ಆಯ್ಕೆಯಾದ ಬಳಿಕ ಬಜೆಟ್ ಮಂಡಣೆ ಮಾಡಬೇಕು ಎಂದು ಒತ್ತಾಯಿಸಿದರು.
ಬೆಳಗಾವಿ ಸ್ಮಾರ್ಟ್ ಸಿಟಿಯ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರ ನಡೆಸಿರುವ ಕುರಿತು ಸಂಬಂಧಿಸಿದ ಇಲಾಖೆಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿಯ ಅಧಿಕಾರಿಗಳ ಮೇಲೆ ತನಿಖೆ ಮಾಡಲು ಸೂಚಿಸಿದ್ದಾರೆ ಎಂದು ಪ್ರತಿಕ್ರಯಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯ ಸುಮಾರು 600 ಕೋಟಿ ರೂ. ರಸ್ತೆ ಹಾಗೂ ಚರಂಡಿಗೆ ವೆಚ್ಚ ಮಾಡಿರುವುದು ನಾಚಿಗೇಡಿತನದ ಸಂಗತಿ. ಇದರಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿರುವ ಅನುಮಾನವೂ ಇದೆ. ಸ್ಮಾರ್ಟ್ ಸಿಟಿ ಕಾಮಗಾರಿಯ ಬಗ್ಗೆ ಮಾಹಿತಿ ಕೇಳಿದರೆ ಯಾರೂ ಕೊಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪಂಜಾಬ್ ಚುನಾವಣೆಯ ಫಲಿತಾಂಶದಿಂದ ಸಾಕಷ್ಡು ಪ್ರಭಾವಿಗಳು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ನ ಭ್ರಷ್ಟಾಚಾರಕ್ಕೆ ಬೇಸತ್ತು ಆಪ್ ನತ್ತ ಮುಖಮಾಡುತ್ತಿದ್ದಾರೆ ಎಂದರು.
ಜಿಲ್ಲಾಧ್ಯಕ್ಷ ವಿಜಯ ಪಾಟೀಲ, ಶಂಕರ ಹೆಗಡೆ, ಅನಿಸ್ ಸೌಧಾಗಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.