Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಗ್ರಾಮೀಣ ಕ್ಷೇತ್ರಾದ್ಯಂತ ಕಚೇರಿ ಆರಂಭ - ಲಕ್ಷ್ಮಿ ಹೆಬ್ಬಾಳಕರ್

localview news

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುದ್ರೆಮನಿ ಗ್ರಾಮದಲ್ಲಿ ಕಾಂಗ್ರೆಸ್ ಕಚೇರಿ ಆರಂಭಿಸಲಾಗಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಂಗಳವಾರ ಉದ್ಘಾಟಿಸಿದರು.

ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು, ಪಕ್ಷದ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸಲು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸುವ ಉದ್ದೇಶದಿಂದ ನೂತನ ಕಾಂಗ್ರೆಸ್ ಕಚೇರಿಯನ್ನು ತೆರೆಯಲಾಗಿದ್ದು, ಮುಂಬರುವ ದಿನಗಳಲ್ಲಿ ಕ್ಷೇತ್ರಾದ್ಯಂತ ಕಚೇರಿಗಳನ್ನು ಪ್ರಾರಂಭಿಸಲಾಗುವುದು ಎಂದು ಹೆಬ್ಬಾಳಕರ್ ತಿಳಿಸಿದರು. ಇದೇ ವೇಳೆ, ನೂತನ ಶ್ರೀ ಲಕ್ಷ್ಮೀ ಹಾಲಿನ ಡೈರಿಯನ್ನು ಸಹ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು, ದೀಪಕ್ ಪಾಟೀಲ, ಅರುಣ ದೇವನ್, ಶಂಕರ ಪಾಟೀಲ, ವೈಜು ರಾಜಗೋಳ್ಕರ್, ಶುಭಾಂಗಿ ರಾಜಗೋಳ್ಕರ್, ಶಶಿಕಾಂತ ಪಾಟೀಲ, ವಿಮಲ್ ಸಕರೆ, ದತ್ತಾ ಶಿವಾಂಗೇಕರ್, ಮಾರುತಿ ಪಾಟೀಲ, ರಾಮನಿಂಗ ಪಾಟೀಲ, ಗೋಪಾಲ ಚೌಗುಲೆ, ರುಕ್ಮಣ್ಣ ಕಾಗನಕರ್, ಜ್ಯೋತಿಬಾ ಬಡಸ್ಕರ್, ಸಣ್ಣಪ್ಪ, ಕಾಶೀನಾಥ್ ದೇವನ್, ರಾವಳು ದೇವನ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಮಹಾಪ್ರಸಾದ ಸೇವೆಗೆ ದೇಣಿಗೆ ಉಚಗಾಂವ ಗ್ರಾಮದಲ್ಲಿ ಶ್ರೀ ಮಳೆಕರಣೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಹಮ್ಮಿಕೊಂಡಿರುವ ಅನ್ನ ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಲಕ್ಷ್ಮೀ ತಾಯಿ ಫೌಂಡೇಷನ್‌ ವತಿಯಿಂದ ಪ್ರಸಾದ ಸೇವೆಗೆ ದೇಣಿಗೆಯನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಭಕ್ತಾಧಿಗಳು, ಸ್ಥಳೀಯ ಜನಪ್ರತಿನಿಧಿಗಳು, ದೇವಸ್ಥಾ‌ನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.

ಪರಿಹಾರ ಮಂಜೂರು ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಒಟ್ಟು 13 ಜನರಿಗೆ ಆಸ್ಪತ್ರೆಯ ವೆಚ್ಚವನ್ನು ಭರಿಸುವ ಸಲುವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣವನ್ನು ಮಂಜೂರು ಮಾಡಿಸಲಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ