Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಸಚಿವ ಈಶ್ವರಪ್ಪ ರಾಜೀನಾಮೆಗೆ ಟೋಪಣ್ಣವರ ಒತ್ತಾಯ.

localview news

ಬೆಳಗಾವಿ : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಟೆಂಡರ್ ಕರೆಯದೆ ರಸ್ತೆ ಕಾಮಗಾರಿಗೆ ಅನುಮತಿ ನೀಡಿ 4 ಕೋಟಿ ಕಾಮಗಾರಿ ಬಿಲ್ ಗೆ 40 ಕಮಿಷನ್ ನೀಡುವಂತೆ ಬೇಡಿಕೆ ಇಟ್ಟ ಸಚಿವ ಕೆ.ಎಸ್.ಈಶ್ವರಪ್ಪ ಕೂಡಲೇ ರಾಜೀನಾಮೆ ನೀಡಬೇಕೆಂದು ಆಪ್ ಉತ್ತರ ವಲಯದ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಒತ್ತಾಯಿಸಿದರು.

ಮಂಗಳವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಹುಬ್ಬಳ್ಳಿಯಲ್ಲಿನ ಗುತ್ತಿಗೆದಾರರು ಪ್ರಧಾನಿ ನರೇಂದ್ರ ‌ಮೋದಿ ಅವರಿಗೆ ಬಿಜೆಪಿ ಸಚಿವರು 40 ಪ್ರತಿಶತ ಕಮಿಷನ್ ಕೇಳುತ್ತಿದ್ದಾರೆ ಎಂದು ಪತ್ರ ಬರೆದಿದ್ದರು. ಈ ಪ್ರಕರಣ ಮಾಸುವ ಮುನ್ನವೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪನವರು ರಸ್ತೆ ಕಾಮಗಾರಿ ಮಾಡಿದ ಬೆಳಗಾವಿ ಗುತ್ತಿಗೆದಾರ ಸಂತೋಷ ಪಾಟೀಲ ಬಿಲ್ ಕೇಳಿದಾಗ 40 ಪ್ರತಿಶತ ಕಮಿಷನ್ ನೀಡುವಂತೆ ಕಿರುಕುಳ ನೀಡಿರುವ ಕುರಿಯಾಗಿಯೂ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಕೂಡಲೇ ಸಚಿವ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.

ಬಿಜೆಪಿ ಸರ್ಕಾರದ ಎಲ್ಲ ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ. ಯಾವುದೇ ಟೆಂಡರ್ ಕರೆಯದೆ ಸಚಿವ ಈಶ್ವರಪ್ಟನವರು ನಾಲ್ಕು ಕೋಟಿ ರೂ.ಗಳ ಕಾಮಗಾರಿಗೆ ಅನುಮತಿ ಯಾವ ಆಧಾರದ ಮೇಲೆ ನೀಡಿದರು ಎಂದು ಪ್ರಶ್ನಿಸಿದರು.

ಸಚಿವ ಕೆ.ಎಸ್.ಈಶ್ವರ ಸಚಿವರಾಗಿ ಮುಂದುವರೆಯಲು ಅರ್ಹರಲ್ಲ. ಅವರ ಮೇಲಿನ ಆರೋಪ ಮುಕ್ತವಾಗುವವರೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

ಬೆಳಗಾವಿ ಸ್ಮಾರ್ಟ್ ಸಿಟಿಯ ಕಾಮಗಾರಿ ಮಾಡುವ ಬಿಇಎಲ್ ಕಂಪನಿಗೆ ಯಾವುದೇ ಅರ್ಹತೆ ಇಲ್ಲ. ಕಳಪೆ ಕಾಮಗಾರಿಯ ತನಿಖೆಯೂ ನಡೆಸುತ್ತಿಲ್ಲ. ಇದರ ವಿರುದ್ಧ ಆಮ್ ಆದ್ಮಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇತ್ತೀಚೆಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಪ್ ಲೈನ್ ಮೂಲಕ 113 ಪ್ಲಾಟ್ ಗಳಿಗೆ ಆಕ್ಷನ್‌ ಮೂಲಕ ಹರಾಜು ಪ್ರಕ್ರಿಯೆ ನಡೆಸಿದ್ದಾರೆ. ಈ ಪೈಕಿ 91 ಪ್ಲಾಟ್ ಗಳನ್ನು ಸರ್ಕಾರಿ ರಜೆ ಇದ್ದ ಸಂದರ್ಭದಲ್ಲಿ ಮಾರಾಟ ಮಾಡಿದ್ದಾರೆ. ಇದರಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದಾರೆ. ಇದರ ಬಗ್ಗೆ ಬುಡಾ ಅಧಿಕಾರಿಗಳು ಮಾಹಿತಿ ನೀಡಲು ಹಿಂದೆ ಮುಂದೆ ನೋಡುತ್ತಿದ್ದಾರೆ ಎಂದು ಆರೋಪಿಸಿದರು.

ರೈತರ ಆಶೀರ್ವಾದದಿಂದ ಪಂಜಾಬ್ ನಲ್ಲಿ ಆಪ್ ಸರ್ಕಾರ ರಚನೆಯಾಗಲು ಸಾಧ್ಯವಾಯಿತು. ಅದರಂತೆ ಕರ್ನಾಟಕದಲ್ಲಿನ‌ ರೈತರ ಸಮಸ್ಯೆ ಹಾಗೂ ಅವರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಹೋರಾಟ ಮಾಡಲಾಗುವುದು ಎಂದರು.

ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿನ ವರ್ತಕರು ಹಾಗೂ ರೈತರಿಗೆ ಅನ್ಯಾಯವಾಗಿದೆ. ಬಿಜೆಪಿ ಸರ್ಕಾರದ ಶಾಸಕರು ಖಾಸಗಿ ಜೈ ಕಿಸಾನ್ ಭಾಜಿ ಮಾರುಕಟ್ಟೆ ನಿರ್ಮಾಣ ಮಾಡಲು ಸಹಕಾರ ಮಾಡಿದ್ದಾರೆ.

ಇದು ಖಂಡನೀಯ. ಸರ್ಕಾರ ಗುಬ್ಬಿಯ ಮೇಲೆ‌ ಬ್ರಹ್ಮಾಸ್ತ್ರ ಎನ್ನುವಂತೆ ಇಲ್ಲಿನ ಕಾರ್ಯದರ್ಶಿಯನ್ನು ವರ್ಗಾವಣೆ ಮಾಡಿದ್ದಾರೆ. ಇಷ್ಟೆ ಸಾಲದು ಖಾಸಗಿ ಮಾರುಕಟ್ಟೆ ಗೆ ಸಹಕಾರ ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಆಪ್ ಮುಖಂಡ ಶಂಕರ ಹೆಗಡೆ, ಅನಿಸ್ ಸೌದಾಗರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.