Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

21 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ: ಕೋಡಿಹಳ್ಳಿ

localview news

ಬೆಳಗಾವಿ : ರೈತ ವಿರೋಧಿ ಮೂರು ಕೃಷಿ ಮಸೂದೆ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದರೂ ರಾಜ್ಯದಲ್ಲಿ ಹಿಂಪಡೆಯಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಏ.21 ರಂದು ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದರು.

ಶುಕ್ರವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಏ.21 ರಂದು ಬೆಂಗಳೂರಿನ ಬಸವನಗುಡಿ ಕಾಲೇಜಿನಲ್ಲಿ ರೈತರ ಬೃಹತ್ ಸಮಾವೇಶ ನಡೆಯಲಿದೆ ಎಂದ ಅವರು, ಕೇಂದ್ರ ಸರಕಾರ ತಂದಿರುವ ಕೃಷಿ ಕಾಯ್ದೆಯನ್ನು ಶಾಸನ ಬದ್ಧವಾಗಿ ಹಿಂಪಡೆಯಲಾಗಿದೆ.

ಆದರೆ ಕರ್ನಾಟಕದಲ್ಲಿ ಆ ಕಾಯ್ದೆಯನ್ನು ತಳಮಟ್ಟದಲ್ಲಿ ಅನುಷ್ಠಾನಕ್ಕೆ ಜಾರಿಗೆ ತಂದು, ಭೂ ಸ್ವಾಧಿನ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ಸಿಎಂ ಗಮನಕ್ಕೆ ತಂದರೂ. ಬೆಳಗಾವಿ ಅಧಿವೇಶನದಲ್ಲಿ ತೆಗೆಯುವುದಾಗಿ ಭರವಸೆ ನೀಡಿದರು.

ಬಳಿಕ ಬೆಂಗಳೂರಿನ ಅಧಿವೇಶನದಲ್ಲಿ ಹಿಂಪಡೆಯುವುದಾಗಿ ಹೇಳಿದ್ದರು. ಕೇವಲ ಕಾಲಹರಣ ಮಾಡಿಕೊಂಡೇ ಹೊರಟ್ಟಿದ್ದಾರೆ ಎಂದು ಆರೋಪಿಸಿದರು.