Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಹೆಬ್ಬಾಳ್ಕರ್ ಕಚೇರಿ, ಅಭಯ ಮನೆ ಮುಂದೆ ಪ್ರತಿಭಟನೆ: ಸಿದಗೌಡ ಮೋದಗಿ

localview news

ಬೆಳಗಾವಿ: ರೈತ ವಿಶ್ವಾಸ ದ್ರೋಹ ವಾರಾಚರಣೆ ಸಪ್ತಾಹ ಕಾರ್ಯಕ್ರಮವನ್ನು ಏ.11 ರಿಂದ‌ 18ರ ವರೆಗೆ ಅಚರಿಸಲಾಗುವುದು ಎಂದು ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಹೇಳಿದರು.

ಶನಿವಾರ ಎಪಿಎಂಸಿ ಕಚೇರಿಯ ಮುಂಭಾಗದಲ್ಲಿ ನಡೆಸಲಾಗುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕೇಂದ್ರ ಸರಕಾರ ಜಾರಿಗೆ ತಂದಿದ್ದ ಮೂರು ಕೃಷಿ ಮಸೂದೆ ಕಾಯ್ದೆಯನ್ನು ಹಿಂಪಡೆದಿದ್ದು ಇತಿಹಾಸ. ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಂಎಸ್ ಪಿ ಯನ್ನು ಕಾನೂನಾತ್ಮಕವಾಗಿ ಖಾತರಿ ಪಡಿಸಲು ತಜ್ಞರ ಸಮಿತಿ ರಚಿಸುವ ಭರವಸೆ ನೀಡಿದ್ದರು. ಈ ಭರವಸೆಯನ್ನು ಸರಕಾರ ಮರೆತಿದೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ರೈತ ವಿಶ್ವಾಸ ದ್ರೋಹ ವಾರಾಚರಣೆ ಸಪ್ತಾಹ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವ ಕುರಿತು, ಸಂಯುಕ್ತ ‌ಹೋರಾಟ ಕರ್ನಾಟಕ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಹಮ್ಮಿಕೊಂಡ ಪ್ರತಿಭಟನೆಯ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಆಗ್ರಹಿಸಲಾಗುವುದು ಎಂದರು.

ಬೆಳಗಾವಿಯ ಗಾಂದಿ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕಾದಲ್ಲಿ ನಿರ್ಮಾಣವಾಗಿರುವ ಜೈ ಕಿಸಾನ್ ಖಾಸಗಿ ತರಕಾರಿ ಮಾರುಕಟ್ಟೆಯನ್ನು ರದ್ದು ಪಡಿಸಬೇಕೆಂದು ಏ.13 ರಂದು ಬೆಳಗಾವಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ‌ಕಚೇರಿಯ ಮುಂಭಾಗದಲ್ಲಿ ಹಾಗೂ ಏ.16ರಂದು ಬಿಜೆಪಿ ಶಾಸಕ ಅಭಯ ಪಾಟೀಲ ಮನೆಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.