Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಏ.16ರಂದು ಭಾಸ್ಕರ್ ರಾವ್ ಬೆಳಗಾವಿಗೆ: ಟೋಪಣ್ಣವರ

localview news

ಬೆಳಗಾವಿ: ಕರ್ನಾಟಕ ಆಮ್ ಆದ್ಮಿ ಮುಖಂಡ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಏ.16 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.

ಆಮ್ ಆದ್ಮಿ ಸೇರ್ಪಡೆಗೊಂಡ ಬಳಿಕ ರಾಜ್ಯದ ಜನರಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ವಿರುದ್ಧ ಹೋರಾಟ ಹಾಗೂ ಆಮ್ ಆದ್ಮಿ ಪಕ್ಷದ ಸಂಘಟನೆಯ ಸಲುವಾಗಿ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರುವ ಅವರು, ಬೆಳಗಾವಿಯಲ್ಲಿ ಆಪ್ ಕಾರ್ಯಕರ್ತರ ಸಮಾವೇಶವನ್ನು ನಗರದ ಗೋವಾವೆಸ್ ಬಳಿ ಇರುವ ಮರಾಠಾ ಮಂದಿರ ನಡೆಸಲಿದ್ದಾರೆ ಎಂದು ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.