Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಭ್ರಷ್ಟಾಚಾರ, ಬೆಲೆ ಏರಿಕೆ ವಿರುದ್ಧ ಪೊರಕೆ ಹಿಡಿದ ಆಪ್ ಆಕ್ರೋಶ

localview news

ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರ್ಕಾರ‌ ಅಗತ್ಯ ವಸ್ತುಗಳ ಬೆಲೆ‌‌ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಹೊರೆ ಹಾಕುತ್ತಿರುವುದನ್ನು ಖಂಡಿಸಿ ಹಾಗೂ ರಾಜ್ಯ ಸರ್ಕಾರ್ ದ 40% ಕಮಿಷನ್ ಭ್ರಷ್ಟಾಚಾರದ ವಿರುದ್ಧ ಬೆಳಗಾವಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಚನ್ನಮ್ಮ ವೃತ್ತದಲ್ಲಿ ಸಿಲಿಂಡರ್ ಹಿಡಿದು, ಒಲೆ ಹಚ್ಚಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಗತ್ಯ ವಸ್ತುಗಳಾದ ಡೀಸೆಲ್‌, ಪೆಟ್ರೋಲ್, ಎಲ್ ಪಿಜಿ, ಸಿಎನ್ ಜಿ, ರಸಗೊಬ್ಬರ, ವಿದ್ಯುತ್, ಕಟ್ಟಡ ಸಾಮಗ್ರಿ ಸೇರಿದಂತೆ ಇನ್ನಿತರ ಬೆಲೆಗಳನ್ನು ಏರಿಕೆ ಮಾಡಿ ಸಾರ್ವಜನಿಕರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರ ರಾಜ್ಯದಲ್ಲಿ ಗುತ್ತಿಗೆದಾರರಿಂದ ಹಾಗೂ ಜನರ ಕೆಲಸಗಳಿಗೆ 40% ಲಂಚ ಪಡೆಯುತ್ತಿರುವುದು ಬಹಿರಂಗವಾಗುತ್ತಿದರಮ ಸಾರ್ವಜನಿಕರ ತೆರಿಗೆ ಹಣವನ್ನು ಭ್ರಷ್ಟಾಚಾರಕ್ಕೆ ಬಳಸಿಕೊಳ್ಳುತ್ತಿರುವ ರಾಜ್ಯ ಸರ್ಕಾರದ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಯನ್ನು ಸಾರ್ವಜನಿಕರಿಂದ ಮರೆ ಮಾಚಲು ಕೋಮು ಗಲಭೆ ಹುಟ್ಟು ಹಾಕಿ ಬಂಡವಾಳ ಹೂಡಿಕೆ ವಾತಾವರಣವನ್ನು ಹಾಳು ಮಾಡಿ ರಾಜ್ಯವನ್ನು ಮತ್ತಷ್ಟು ನರಕಕ್ಕೆ ತಳ್ಳುವ ಹುನ್ನಾರ ಬಿಜೆಪಿ ‌ನಡೆಸಿದೆ. ಇದಕ್ಕೆ ಕಾಂಗ್ರೆಸ್ ಸಹ ಬೆಂಬಲ ನೀಡುತ್ತಿದೆ. ಸರ್ಕಾರದ ವಿರುದ್ಧ ಹೋರಾಟ ಮಾಡುವ ನೆಪ‌ ಮಾಡುತ್ತಿರುವ ಕಾಂಗ್ರೆಸ್ ಪರೋಕ್ಷವಾಗಿ ಸರ್ಕಾರಕ್ಕೆ ಸಹಾಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಅಭಿವೃದ್ಧಿ ಕುಂಠಿತ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕಿದ್ದ ಬಿಜೆಪಿ ಬೆಳಗಾವಿಯಲ್ಲಿ ಎರಡು ದಿನದ ವಿಭಾಗೀಯ ಮಟ್ಟದ ಸಭೆ ನಡೆಸಿ ತಮ್ಮ ಲೋಪದೋಷ ಸರಿಪಡಿಸಿಕೊಂಡು ಮತ್ತೇ ಭ್ರಷ್ಟಾಚಾರ ನಡೆಸುವ ಬಗ್ಗೆ ಚರ್ಚೆ ಮಾಡಲು‌ ಆಗಮಿಸಿದ್ದಾರೆ ಎಂದು ಪ್ರತಿಭಟನಾ ನಿರತರರು ದೂರಿದರು.

ಆಪ್ ಉತ್ತರ ವಲಯದ ಉಸ್ತುವಾರಿ ರಾಜಕುಮಾರ ಟೋಪಣ್ಣವರ, ಬೆಳಗಾವಿ ಜಿಲ್ಲಾಧ್ಯಕ್ಷ ವಿಜಯ ಪಾಟೀಲ, ಶಂಕರ ಹೆಗಡೆ, ಅನಿಸ್ ಸೌದಾಗರ, ಸುಲೇಮಾನ ಮುಲ್ಲಾ, ಮುಸ್ಕಾನ್ ಮಿರ್ಚಿವಾಲೆ, ಸಂಧ್ಯಾ ಧರ್ಮದಾಸ, ಅಬ್ದುಲ್ ತವಾಬ್ ಸೇಠ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.