Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

15 ದಿನಗಳ ನಿರಂತರ ಪ್ರವಚನ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ

localview news

ಬೆಳಗಾವಿ : ಬೆಳಗಾವಿ ತಾಲೂಕಿನ ತಪೋಭೂಮಿ ಅರಳೀಕಟ್ಟಿ ಗ್ರಾಮದಲ್ಲಿ ನಿರಂತರ 15 ದಿನಗಳ ಕಾಲ ನಡೆಯಲಿರುವ ಜೀವನ ದರ್ಶನ ಪ್ರವಚನ ಕಾರ್ಯಕರ್ಮಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಸಂಜೆ ಚಾಲನೆ ನೀಡಿದರು.

ಶ್ರೀ ತೋಂಟದಾರ್ಯ ವಿರಕ್ತಮಠದ ಶ್ರೀ ಶಿವಮೂರ್ತಿ ದೇವರ ನಿರಂಜನ ಚರಪಟ್ಟಾಧಿಕಾರ ಮಹೋತ್ಸವದ ಪ್ರಯುಕ್ತ ಯುಗಪುರಷ ಹಾನಗಲ್ ಶ್ರೀ ಕುಮಾರ ಮಹಾಶಿವಯೋಗಿಗಳವರಿಂದ 15 ದಿನ ಜೀವನ ದರ್ಶನ ಪ್ರವಚನ ನಡೆಯಲಿದೆ.

ಶಾಂತಿ, ನೆಮ್ಮದಿಯಿಂದ ಜೀವನ ನಡೆಸಲು ಪುರಾಣ, ಪ್ರವಚನ ಕಾರ್ಯಕ್ರಮಗಳು ಅವಶ್ಯ. ಇಂದಿನ ಆಧುನಿಕ ತಂತ್ರಜ್ಞಾನಗಳ ಯುಗದಲ್ಲೂ ಹಳ್ಳಿಗಳಲ್ಲಿ ಪ್ರವಚನಗಳನ್ನು ಆಯೋಜಿಸುತ್ತಿರುವುದು ಪ್ರಶಂಸಾರ್ಹವಾಗಿದೆ ಎಂದು ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ, ದೇವಸ್ಥಾನ, ಸಮುದಾಯ ಭವನಗಳಿಗೆ ಸಾಕಷ್ಟು ನೆರವು ನೀಡುತ್ತಿದ್ದೇನೆ. ಜನರ ನೆಮ್ಮದಿಯ ಬದುಕೇ ನಮಗೆ ಮುಖ್ಯ ಎಂದು ಅವರು ಹೇಳಿದರು.