ನಾಳೆ ದೆಹಲಿಗೆ ಹೊಗುತ್ತಿದ್ದೇನೆ; ಸಿಎಂ
ಬೆಳಗಾವಿ: ಸಚಿವ ಸಂಪುಟದ ಬಗ್ಗೆ ಚರ್ಚೆಯಾಗಿಲ್ಲ. ನಾಳೆ ದೆಹಲಿಗೆ ತೆರಳುತ್ತಿದ್ದೇನೆ. ಹೈಕಮಾಂಡ್ ಜತೆಗೆ ಚರ್ಚೆ ನಡೆಸಿ ಅವರ ಸೂಚನೆ ಮೆರೆಗೆ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆ ಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾರಿಗೆ ಎಷ್ಟು ಸ್ಥಾನ ನೀಡಬೇಕು ಎಂಬುದು ಹೈಕಮಾಂಡ್ ಸೂಚನೆ ಮೆರೆಗೆ ಮಾಡಲಾಗುವುದು ಎಂದರು.
ಬೆಳಗಾವಿ ಜಿಲ್ಲೆಯ ದೊಡ್ದದಿದ್ದೆ. ಇದರ ವಿಭಜನೆ ಮಾಡಬೇಕೆಂದು ಹಲವಾರು ವರ್ಷಗಳಿಂದ ಬೇಡಿಕೆ ಇದೆ. ಸೂಕ್ತ ಸಮಯದಲ್ಲಿ ನಿರ್ಧರಿಸಲಾಗುವುದು ಎಂದರು.
ಸಚಿವರಾದ ಸಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.