Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಅಪರಾಧಿಗಳಿಗೆ ರಕ್ಷಣೆ ನೀಡುವ ಕೆಲಸ ಮಾಡಬಾರದು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

localview news

ಬೆಂಗಳೂರು: ನಾವು ಅಪರಾಧಿಗಳ ವಿರುದ್ಧ ಇದ್ದೇವೆ. ಅಪರಾಧ ಮತ್ತು ಅಪರಾಧಿಗಳ ರಕ್ಷಣೆಯ ಕೆಲಸವನ್ನು ಯಾರೂ ಕೂಡ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ನೃಪತುಂಗ ವಿಶ್ವವಿದ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಬಳ್ಳಾರಿಯ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು.

ಕೇಂದ್ರ ಗೃಹ ಸಚಿವರು ನಿರ್ಭಯಾ ಯೋಜನೆಯಡಿ 750 ಕೋಟಿ ರೂ.ಗಳನ್ನು ಕರ್ನಾಟಕಕ್ಕೆ ಒದಗಿಸಿದ್ದಾರೆ. ಬೆಂಗಳೂರಿನಲ್ಲಿ 7000 ಕ್ಕಿಂತ ಹೆಚ್ಚು ಸಿಸಿ ಟಿ ವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮಹಿಳಾ ಸುರಕ್ಷತೆಗಾಗಿ ಈ ವ್ಯವಸ್ಥೆ ನೀಡಿದ್ದಕ್ಕಾಗಿ ಎಫ್.ಎಸ್ ಎಲ್ ವಿಶ್ವ ವಿದ್ಯಾಲಯ ಕ್ಯಾಂಪಸ್ ನಿರ್ಮಾಣಕ್ಕೆ ಮುಂದಾಗಿರುವುದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಧನ್ಯವಾದಗಳನ್ನು ಅರ್ಪಿಸಿದರು.

ಎಫ್.ಎಸ್.ಎಲ್ ಪ್ರಯೋಗಾಲಯ :

ಗೃಹ ಇಲಾಖೆಯ ಎಫ್.ಎಸ್.ಎಲ್ ಪ್ರಯೋಗಾಲಯಗಳನ್ನು ಎಲ್ಲ ವಿಭಾಗಳಲ್ಲಿ ತೆರೆಯಲಾಗಿದೆ. ಅಪರಾಧಗಳನ್ನು ತಡೆಯಲು ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚಲು ಇದರಿಂದ ನೆರವಾಗಿದೆ ಎಂದರು. ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಸಂಸದ ಪಿ ಸಿ ಮೋಹನ್, ಡಿಜಿಪಿ ಪ್ರವೀಣ ಸೂದ ಮತ್ತು ಇತರರು ಉಪಸ್ಥಿತರಿದ್ದರು.