Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಸರಕಾರದಿಂದ ಸಾಧ್ಯವಾಗದ ಕೆಲಸ ಮಠದಿಂದ - ಲಕ್ಷ್ಮಿ ಹೆಬ್ಬಾಳಕರ್

localview news

ಬೆಳಗಾವಿ : ನಾಡಿನ ಅನೇಕ ಮಠಗಳು ಅಕ್ಷರ, ಅನ್ನ, ಆಶ್ರಯ ಮೊದಲಾದ ದಾಸೋಹದ ಮೂಲಕ ಲಕ್ಷಾಂತರ ಮಕ್ಕಳ ಭವಿಷ್ಯಕ್ಕೆ ದಾರಿ ದೀಪವಾಗಿವೆ. ಸರಕಾರದಿಂದ ಸಾಧ್ಯವಾಗದ ಕೆಲಸಗಳನ್ನು ಇಂದಿನ ಯುಗದಲ್ಲಿ ಮಠಗಳು ಮಾಡಿ ಮಾದರಿಯಾಗಿವೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ತಾಲೂಕಿನ ಅರಳಿಕಟ್ಟಿ ಗ್ರಾಮದ ತೋಂಟದಾರ್ಯ ವಿರಕ್ತಮಠದ ಶ್ರೀ ಶಿವಮೂರ್ತಿ ದೇವರ ಪಟ್ಟಾಧಿಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಶ್ರೀ ಶಿವಮೂರ್ತಿ ದೇವರು ನಮ್ಮ ಧರ್ಮ, ಸಂಸ್ಕೃತಿ, ಸಮಾಜ ಉದ್ಧಾರ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡು, ನಮಗೆ ಮತ್ತು ಸಮಾಜಕ್ಕೆ ಮಾರ್ಗದರ್ಶನ, ಹಿತವಚನ, ಆಶೀರ್ವಾದ ನೀಡುತ್ತ ಬಂದಿದ್ದಾರೆ. ನಮ್ಮ ಧರ್ಮ, ಆಚರಣೆ, ಸಂಸ್ಕೃತಿ, ಅದರ ಪಾಲನೆ ಈ ದೇಶದ ಆಸ್ತಿ, ನಮ್ಮ ದೇಶ ಬಹುಧರ್ಮ, ಬಹು ಸಂಸ್ಕೃತಿಯ ಪುಣ್ಯ ಭೂಮಿಯಾಗಿದೆ. ಸರ್ವ ಧರ್ಮ ಸಹಿಷ್ಣುತೆ, ಸಮನ್ವಯತೆ, ಏಕತೆ ಈ ದೇಶದ ಮೂಲ ಮಂತ್ರವಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದರು.

ಈ ವೇಳೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ, ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಉಪಸ್ಥಿತರಿದ್ದರು