Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಸಹಕಾರ ಕ್ಷೇತ್ರದಲ್ಲಿ ಎಲ್ಲ‌‌ ಪಕ್ಷದವರು ಸಾಲ ಪಡೆದಿದ್ದಾರೆ: ಸಚಿವ ಸೋಮಶೇಖರ

localview news

ಬೆಳಗಾವಿ: ಸಹಕಾರ ಕ್ಷೇತ್ರದಲ್ಲಿ ಕೇವಲ ರಮೇಶ ಜಾರಕಿಹೊಳಿಯವರದ್ದು ಮಾತ್ರ ಸಾಲ ಇಲ್ಲ, ಲಕ್ಷ್ಮೀ ಹೆಬ್ಬಾಳ್ಕರ್, ಬಂಡೇಪ್ಪ ಕಾಂಶಪೂರ ಸಹ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ ತಿಳಿಸಿದರು.

ಮಂಗಳವಾರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇವಲ ರಮೇಶ ಜಾರಕಿಹೊಳಿ ಅಲ್ಲ, ಲಕ್ಷ್ಮೀ ಹೆಬ್ಬಾಳ್ಕರ್, ಬಂಡೆಪ್ಪ ಕಾಂಶಪೂರ್ ಬಾಕಿ ಉಳಿಸಿಕೊಂಡಿದ್ದಾರೆ. ಸಕ್ಕರೆ ಕಾರ್ಖಾನೆ ಇರುವ 25 ಜನರು ಸಾಲ ಪಡೆದಿದ್ದಾರೆ ಎಂದರು.

ಕೇಲವರು ಬಡ್ಡಿನು ಹಾಗೂ ಅಸಲು ಕಟ್ಟಿಲ್ಲ. ದಕ್ಷಿಣ ಕನ್ನಡ, ತುಮಕೂರು ಡಿಸಿಸಿ ಬ್ಯಾಂಕ್ ನಿಂದ ಸಾಲ ಪಡೆದಿದ್ದಾರೆ. ರಾಜ್ಯದಲ್ಲಿ 6 ಸಾವಿರ ಕೋಟಿ ರೂಪಾಯಿ ಸಾಲ ಬಾಕಿ ಉಳಿದಿದೆ. ಇದನ್ನು ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಮಾಜಿ ಸಚಿವ ರಮೇಶ ಜಾರಕಿಹೊಳಿ ಸಕ್ಕರೆ ಕಾರ್ಖಾನೆಯಿಂದ ಹಣ ಬಾಕಿ. ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯಿಂದ ಬಾಕಿ. ಯಾರೆಲ್ಲ ಬಾಕಿ ಉಳಿಸಿಕೊಂಡಿದ್ದಾರೆ ಅವರಿಗೆಲ್ಲ ನೋಟಿಸ್ ನೀಡಲಾಗಿದೆ. ಸಾಲ ಕೊಟ್ಟಿದ್ದು, ಅದನ್ನು ಮರುಪಾವತಿ ಮಾಡಲು ನೋಟಿಸ್ ಕೊಟ್ಟಿದ್ದಾರೆ ಎಂದರು.

ಸಚಿವರ ಹೇಳಿಕೆಗೆ ಸ್ಪಷ್ಟನೆ ನೀಡಿದ ಹರ್ಷ ಶುಗರ್ಸ್ ಎಂ.ಡಿ. ವಿಧಾನ ಪರಿಷತ್ ಸದಸ್ಯ, ನಾವು ಪಡೆದುಕೊಂಡಿರುವ ಸಾಲವನ್ನು ಮರುಪಾವತಿ ಮಾಡಿದ್ದೇವೆ.‌ ಸಹಕಾರ ಸಚಿವ ಎಸ್.ಟಿ.ಸೋಮಶೇಖರ ಅವರು ಸಾಲ‌ ಪಡಿದ್ದಾರೆ ಎಂದು‌ ಹೇಳಿದ್ದಾರೆ. ವಿನಃ ಮರುಪಾವತಿಸಿಲ್ಲ ಎಂದು ಹೇಳಿಲ್ಲ ಎಂದರು.