Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಬೆಳಗಾವಿಯಲ್ಲಿ ಎಂಎಲ್ಸಿ ಪುಟ್ಟಣ್ಣ ಹೇಳಿದ್ದೇನು ?

localview news

ಬೆಳಗಾವಿ: ವಾಯುವ್ಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿರುವ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸುತ್ತಾರೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ತಿಳಿಸಿದರು.

ಸೋಮವಾರ ‌ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಬೆಳಗಾವಿ ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘ ಸೇರಿದಂತೆ ವಿವಿಧ ಶಾಲಾ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ. ಅವರು ವಾಯುವ್ಯ ಶಿಕ್ಷಣ ಮತಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ ಹಾಗೂ ಪದವೀಧರ ಮತಕ್ಷೇತ್ರದ ಅಭ್ಯರ್ಥಿ ಹಣಮಂತ ನಿರಾಣಿ ಅವರಿಗೆ ಬೆಂಬಲ ಸೂಚಿಸಿರುವುದಾಗಿ ತಿಳಿಸಿದ್ದಾರೆ ಎಂದರು.

ಚುನಾವಣೆ ಬಂದಾಯ ಕ್ರಿಯಾಶೀಲವಾಗುವ ಕಾಂಗ್ರೆಸ್ ಮತದಾರರಿಗೆ ಲ್ಯಾಪ್ ಟಾಪ್ ನೀಡುತ್ತಿದ್ದಾರೆ ಎನ್ನುವ ಮಾಹಿತಿ ಬರುತ್ತಿವೆ ಎಂದರು. ಮೇ.25ಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಹಣಮಂತ ನಿರಾಣಿ ಹಾಗೂ ಅರುಣ ಶಹಾಪುರ‌ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಆಗ ನಮ್ಮ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗಮಿಸಲಿದ್ದಾರೆ ಎಂದರು.

ನಗರ ಘಟಕದ ಅಧ್ಯಕ್ಷ ಶಶಿ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.