Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಬಿ.ವೈ.ವಿಜಯೇಂದ್ರಗೆ "ಶಾ"ಕ್ ಕೊಟ್ಟ ಹೈಕಮಾಂಡ್

localview news

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕೊನೆಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಹೈ ಕಮಾಂಡ್ ಶಾಕ್ ನೀಡಿದೆ.

ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಹೈ ಕಮಾಂಡ್ ನಿರಾಕರಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೂ ಶಾಕ್ ನೀಡಿದೆ. ಲಿಂಗಾಯತ ಕೋಟಾದಲ್ಲಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಧಾರವಾಡದ ಲಿಂಗರಾಜ್ ಪಾಟೀಲ್, ಮಹಿಳಾ ಹಾಗೂ ಒಕ್ಕಲಿಗ ಕೋಟಾದಲ್ಲಿ ಶಿವಮೊಗ್ಗ ಮೂಲದ ಸಿ. ಮಂಜುಳಾ, ದಲಿತ ಕೋಟಾದಲ್ಲಿ ಎಸ್‍ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಹಾಗೂ ಒಬಿಸಿ ಕೋಟಾದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಕೇಶವ ಪ್ರಸಾದ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಿಧಾನ ಪರಿಷತ್‍ಗೆ ಪ್ರವೇಶ ಪಡೆದು ಸಚಿವ ಸಂಪುಟದಲ್ಲಿ ಅವಕಾಶ ಪಡೆಯುತ್ತಾರೆ ಎಂದು ಹೇಳಾಗುತ್ತಿದ್ದ ಬಿ.ವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದೇ ಹೈ ಕಮಾಂಡ್ ನಿರಾಸೆ ಮೂಡಿಸಿದೆ. ಈ ಮೂಲಕ ಕುಟುಂಬ ರಾಜಕಾರಣಕ್ಕೆ ಪಕ್ಷ ಮನ್ನಣೆ ಹಾಕುವುದಿಲ್ಲ ಎಂಬ ಸಂದೇಶವನ್ನು ಹೈಕಮಾಂಡ್ ರವಾನಿಸಿದೆ. ಇತ್ತ ಮುಂಬರುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಳಿ ಯಾವ ಮುಖ ಇಟ್ಟುಕೊಂಡು ಚುನಾವಣೆ ಪ್ರಚಾರಕ್ಕೆ ಹೈಕಮಾಂಡ್ ಆಹ್ವಾನಿಸುತ್ತದೆ ಎನ್ನುವುದನ್ನು ಕಾದು ನೋಡಬೇಕಷ್ಟೆ.