Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಬಿಜೆಪಿಯಲ್ಲಿ ಗುಂಪುಗಾರಿಕೆ, ಭಿನ್ನಾಭಿಪ್ರಾಯ ಇಲ್ಲ: ಕಟೀಲ

localview news

ಬೆಳಗಾವಿ : ಬೆಳಗಾವಿ ‌ಬಿಜೆಪಿಯಲ್ಲಿ ಗುಂಪುಗಾರಿಕೆ, ಭಿನ್ನಾಭಿಪ್ರಾಯ ಇಲ್ಲ. ಅಭಿಪ್ರಾಯದಲ್ಲಿ ವ್ಯತ್ಯಾಸಗಳಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಹೇಳಿದರು.

ಗುರುವಾರ ವಾಯುವ್ಯ ಪದವೀಧರ ಹಾಗೂ ಶಿಕ್ಷಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ರಾಷ್ಟ್ರೀಯ ಪಕ್ಷ. ಒಂದು ಮನೆಯಲ್ಲಿ ಯಾವ ರೀತಿ ಅಭಿಪ್ರಾಯ ಇರುತ್ತದೆಯೋ ಆ ರೀತಿ ಇರುತ್ತದೆ. ಅದನ್ನು ಎಲ್ಲರೂ ಕುಳಿತು ಬಗೆಹರಿಸಿಕೊಳ್ಳುತ್ತೇವೆ. ಅದನ್ನು ಬಿಟ್ಟು ಭಿನ್ನಾಭಿಪ್ರಾಯ ಎನ್ನುವುದು ಸರಿಯಲ್ಲ ಎಂದು ಪ್ರತಿಕ್ರಯಿಸಿದರು.

ಚುನಾವಣೆಯಿಂದ ಚುನಾವಣೆಯಲ್ಲಿ ಕೆಲವೊಂದು ವ್ಯತ್ಯಾಸಗಳಿರುತ್ತದೆ. ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಬಗ್ಗೆ ಚಿಂತನಾ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಬಗೆಹರಿಸಲಾಗಿದೆ. ಈ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಎಲ್ಲ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಲಿದ್ದಾರೆ ಎಂದರು.

ರಾಜ್ಯದಲ್ಲಿ ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಾಯುವ್ಯ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ಹಾಗೂ ಶಿಕ್ಷಕ ಮತಕ್ಷೇತ್ರದ ಅಭ್ಯರ್ಥಿ ಅರುಣ ‌ಶಹಾಪುರ‌ ಗೆಲವು ಸಾಧಿಸುವುದು ನಿಶ್ಚಿತ ಎಂದರು.