ಬೆಳಗಾವಿ: ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಹಿರಿಯ ಐ.ಎ.ಎಸ್. ಅಧಿಕಾರಿ ಮನೀಷ್ ಮೌದ್ಗಿಲ್ ಅವರನ್ನು ಚುನಾವಣಾ ಆಯೋಗ ನೇಮಿಸಿದೆ.
ಈ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಏನಾದರೂ ದೂರು ಅಥವಾ ಮಾಹಿತಿಯನ್ನು ನೀಡಲು ಅವರ ಮೊಬೈಲ್ ಸಂಖ್ಯೆ- 9483680431 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.