Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಬೆಳಗಾವಿಗೆ ಏಮ್ಸ್ ನೀಡುವಂತೆ ಆಮ್ ಆದ್ಮಿ ಒತ್ತಾಯ

localview news

ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವಂತೆ ಒತ್ತಾಯಿಸಿ ಮಂಗಳವಾರ ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ರವಾನಿಸಿದರು.

ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಮೂರು ರಾಜ್ಯಗಳ ಸಂಪರ್ಕಕೊಂಡಿಯಾಗಿರುವ ಬೆಳಗಾವಿ ಜಿಲ್ಲೆಗೆ ಏಮ್ಸ್ ಆಸ್ಪತ್ರೆಯನ್ನು ಸರ್ಕಾರ ಮಂಜೂರು ಮಾಡಬೇಕು. ವಿಮಾನ, ರೈಲ್ವೆ ನಿಲ್ದಾಣ, ಸುಜ್ಜಿತ ಬಸ್‌ಗಳ ಸೌಕರ್ಯ ಹೊಂದಿರುವ ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತ್ಯಂತ ದೊಡ್ಡ ಜಿಲ್ಲೆಯಾಗಿದೆ. ಏಮ್ಸ್ ನಿರ್ಮಾಣ ಮಾಡಲು ಬೆಳಗಾವಿ ಸೂಕ್ತವಾಗಿದೆ. ಬೆಳಗಾವಿಯಲ್ಲಿಯೇ ಎಮ್ಸ್ ನಿರ್ಮಾಣ ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬಿಮ್ಸ್ ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಯನ್ನು ಹೊಂದಿರುವ ಬೆಳಗಾವಿ ಜಿಲ್ಲೆಗೆ ದೇಶ ವಿದೇಶದಿಂದಲೂ ವಿದ್ಯಾರ್ಥಿಗಳು ಇಲ್ಲಿ ಅಧ್ಯಯನ ನಡೆಸಲು ಬರುತ್ತಾರೆ. ಆದ್ದರಿಂದ ಬೆಳಗಾವಿಗೆ ಏಮ್ಸ್ ಮಂಜೂರು ಮಾಡಿ ಈ ಭಾಗದ ಜನರಿಗೆ ಅನಕೂಲ ಮಾಡಿಕೊಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಆಮ್ ಆದ್ಮಿ ಮುಖಂಡ ಶಂಕರ ಹೆಗಡೆ ಉಪಸ್ಥಿತರಿದ್ದರು.