Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು ಯಾರಿಗೆ ?

localview news

ಬೆಳಗಾವಿ: ಶಿಕ್ಷಣ ಕ್ಷೇತ್ರಕ್ಕೆ ಹಲವಾರು ಸೌಲಭ್ಯ ಕಲ್ಪಿಸಿದ್ದು ಜೆಡಿಎಸ್. ಜೆಡಿಎಸ್ ಸರಕಾರದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಶನಿವಾರ ನಗರದ ಗಾಂಧಿ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನನ್ನ ಅವಧಿಯಲ್ಲಿ ಶಿಕ್ಷಕರಿಗೆ ಉದ್ಯೋಗ ಕಲ್ಪಿಸುವುದು. ಶಿಕ್ಷಕರ ನೇಮಕ ಪ್ರಕ್ರಿಯೆ ನನ್ನ ಅವಧಿಯಲ್ಲಿ ನಡೆದಿದೆ. ಕಾಂಗ್ರೆಸ್, ಬಿಜೆಪಿ ಸರಕಾರದಲ್ಲಿ ಶೈಕ್ಷಣಿಕ ಕೊಡುಗೆಗಳು ಶೂನ್ಯ.

2006 ರಲ್ಲಿ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಿದ್ದು ಜೆಡಿಎಸ್ ಸರಕಾರ. ಕೆಲವು ಅನುದಾನಿತ ಶಾಲೆಗಳನ್ನು ಘೋಷಣೆ ಮಾಡಿದ್ದನ್ನು ಇಲ್ಲಿಯವರೆಗೂ ಸೌಲಭ್ಯ ನೀಡಲು ರಾಷ್ಟ್ರೀಯ ಪಕ್ಷಗಳಿಗೆ ಸಾಧ್ಯವಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಸಂಘಟಿಸುವಲ್ಲಿ ಹಿನ್ನಡೆಯಾಗಿದೆ. ಕಾರಣ ಕೊರೊನಾ ಸೋಂಕಿನ ಭೀತಿ. ಆದರೂ ಜೆಡಿಎಸ್ ಪಕ್ಷದ ಜತೆಗೆ ಉತ್ತರ ಕರ್ನಾಟಕ, ಮುಂಬೈ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲ ಪಡಿಸುವ ಉತ್ಸುಕದಲ್ಲಿ ನಮ್ಮ ಪಕ್ಷ ಸನ್ನದ್ದವಾಗಿದೆ ಎಂದರು.

ಬಿಜೆಪಿ ಸರಕಾರದಲ್ಲಿ ಯಾರೂ ಸಂತೋಷವಾಗಿಲ್ಲ. ಜೆಡಿಎಸ್ ಸರಕಾರದ ಅವಧಿಯಲ್ಲಿ ನೀಡಿದ ಕೊಡುಗೆ ಜನರು ಮರೆತಿಲ್ಲ. ರಾಜ್ಯದಲ್ಲಿ ಮತ್ತೇ ಹೊಸ ಪರ್ವ ಆರಂಭವಾಗುವ ಕಾಲ ದೂರವಿಲ್ಲ ಎಂದು ಭವಿಷ್ಯ ನುಡಿದರು.

ನಮ್ಮ ನಾಡಿದ ಜನತೆ ಯಾವುದೇ ಒಂದು ಸರಕಾರ ಉಚಿತವಾಗಿ ಕೊಡುವ ಕೊಡುಗೆ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.