Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ರಾಜ್ಯಸಭಾ ಚುನಾವಣೆ: ಬಿಜೆಪಿ ಇಂದ ಯಾರಿಗೂ ಪ್ರಸ್ತಾವನೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

localview news

ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಇಂದ ಯಾರಿಗೂ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಬಿಜೆಪಿ ತನ್ನ ಬಲದಿಂದಲೇ ಗೆಲ್ಲಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಇರುವ ಪ್ರಸ್ತಾವನೆಗೂ ನಮಗೂ ಸಂಬಂಧವಿಲ್ಲ ಎಂದರು.

ಶೀಘ್ರದಲ್ಲಿಯೇ ಲೋಕಾಯುಕ್ತರ ನೇಮಕ:

ಲೋಕಾಯುಕ್ತ ನೇಮಕಾತಿಗೆ ಎಲ್ಲ ಪ್ರಕ್ರಿಯೆ ಮುಗಿದು ಕೊನೆ ಹಂತದಲ್ಲಿದೆ. ಆದಷ್ಟು ಬೇಗನೆ ಲೋಕಾಯುಕ್ತರು ನೇಮಕವಾಗಲಿದ್ದಾರೆ ಎಂದರು.