ಚುನಾವಣೆಯಲ್ಲಿ ಏನಾಯ್ತು.. ? ಎಷ್ಟು % ಮತದಾನವಾಗಿದೆ. ?
ಬೆಳಗಾವಿ: ವಾಯುವ್ಯ ಶಿಕ್ಷಕ ಹಾಗೂ ಪದವೀಧರ ಮತಕ್ಷೇತ್ರದ ಚುನಾವಣೆಯ ಮತದಾನ ಜಿಲ್ಲೆಯಲ್ಲಿ ಶಿಕ್ಷಕ ಮತಕ್ಷೇತ್ರದಲ್ಲಿ 86.72%, ಪದವೀ 67.80 % ಮತದಾನವಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ವಾಯುವ್ಯ ಶಿಕ್ಷಕ ಹಾಗೂ ಪದವೀಧರ ಮತಕ್ಷೇತ್ರದ ಚುನಾವಣೆಯ ಮತದಾನದ ದಿನವಾದ ಇಂದು ಬೆಳಗಿನ ಜಾವ ಮಂದಗತಿಯಲ್ಲಿ ಮತದಾನವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಬಿರುಸಿನ ಮತದಾನವಾಯಿತು.
ಅಲ್ಲಲ್ಲಿ ಸಣ್ಣ ಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಮತದಾನ ಶಾಂತ ರೀತಿಯಲ್ಲಿ ಆಯಿತು.
ವಿಶ್ವೇಶ್ವರಯ್ಯ ನಗರದಲ್ಲಿ ಬಿಜೆಪಿ ಶಾಸಕ ಅನಿಲ ಬೆನಕೆ ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಹಿನ್ನಲೆಯಲ್ಲಿ ಅವರು ಸೇರಿದಂತೆ ಐವರ ಮೇಲೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಟ್ಟಾರೆ ಜಿಲ್ಲೆಯಲ್ಲಿ ಈ ಬಾರಿ ಪರಿಷತ್ ಚುನಾವಣೆಯಲ್ಲಿ ಯಾರು ಗೆಲವು ಸಾಧಿಸುತ್ತಾರೆ ಎನ್ನುವುದು ಬುಧವಾರ ಸ್ಪಷ್ಟ ಚಿತ್ರಣ ದೊರಯಲಿದೆ.