ಹೆಬ್ಬಾಳ್ಕರ್ ಮನೆಗೆ ವಿಪ ಸದಸ್ಯ ಹುಕ್ಕೇರಿ ಭೇಟಿ
ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪ್ರಕಾಶ ಹುಕ್ಕೇರಿ ಅವರು ಗುರುವಾರ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಮನೆಗೆ ತೆರಳಿ ತಮ್ಮ ಗೆಲುವಿನಲ್ಲಿ ದೊಡ್ಡ ಪಾತ್ರ ನಿರ್ವಹಿಸಿದ್ದಕ್ಕಾಗಿ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚಿಸಿದರು.