ಸತೀಶ ಪಾಟೀಲ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ
ಬೆಳಗಾವಿ: ಗೌಂಡವಾಡ ಗ್ರಾಮದ ಸತೀಶ ಪಾಟೀಲ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಬುಧವಾರ ಮೃತ ಸತೀಶ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಹಲಾವರು ವರ್ಷಗಳಿಂದ ಸತೀಶ ದೇವಸ್ಥಾನದ ಜಮೀನು ಕಬಳಿಕೆ ಮಾಡುವವರ ವಿರುದ್ಧ ಹೋರಾಟ ನಡೆಸಿಕೊಂಡು ಬರುತ್ತಿದ್ದ ಇದನ್ನು ಸಹಿಸದ ಕೆಲ ಕಿಡಿಗೇಡಿಗಳು ಸತೀಶ ಪಾಟೀಲನನ್ನು ಕೊಲೆ ಮಾಡಿದ್ದಾರೆ. ಕೊಲೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.
ಕೊಲೆ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕಿದ್ದ ಪೊಲೀಸರು ಸತೀಶ ಕುಟುಂಬಕ್ಕೆ ಧಮ್ಕಿ ನೀಡುತ್ತಿದ್ದಾರೆ. ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.