Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಮುಂಬೈ ಇಂಡಿಯನ್ಸ್ ಗೆ ಒಲಿದು ಬಂದ ಐಪಿಎಲ್ ಕಿರೀಟ: ಐದನೇ ಬಾರಿಗೆ ಚಾಂಪಿಯನ್ ಆದ ಮುಂಬೈ

localview news

ದುಬೈ: ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ 13 ನೇಮ ಆವೃತ್ತಿಯ ಐಪಿಎಲ್​ನ ಫೈನಲ್​ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು. ಒಂದು ತಿಂಗಳಿಗೂ ಹೆಚ್ಚು ಕಾಲ ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳ ಮನೆ ಮನಸ್ಸು ಆವರಿಸಿದ್ದ 13 ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಮೊದಲ ಬಾರಿಗೆ ಫೈನಲ್ ಹಂತಕ್ಕೆ ತಲುಪಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 7 ವಿಕೆಟ್ ಕಳೆದುಕೊಂಡು 156 ರನ್ ಪೇರಿಸಿತ್ತು. ಸಾಧಾರಣ ಮೊತ್ತ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಇನ್ನು 8 ಎಸೆತಗಳು ಇರುವಂತೆ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ (68) 05 ಪೋರ, 4 ಸಿಕ್ಸ್ , ಕ್ಚಿಂಟನ್ ಡಿ ಕಾಕ್ 20, ಸೂರ್ಯಕುಮಾರ್ ಯಾದವ್ 19, ಇಶನ್ ಕಿಶನ್ (33) 03 ಪೋರ,1 ಸಿಕ್ಸ್, ಕೀರನ್ ಪೊಲ್ಲಾರ್ಡ್ 9, ಹಾರ್ದಿಕ್ ಪಾಂಡ್ಯ 3 ಮತ್ತು ಕ್ರುನಾಲ್ ಪಾಂಡ್ಯ 1 ರನ್ ಗಳಿಸಿದ್ದಾರೆ. ಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.