
ಸಿಎಂಗೆ ಕೋವಿಡ್-19 ಪಾಸಿಟಿವ್
- 30 Dec 2023 , 6:32 AM
- Belagavi
- 81
ಬೆಳಗಾವಿ :ಒಂದು ವಾರಗಳ ಕಾಲ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸುತ್ತಾಡಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ನವರಿಗೆ ಕೊರೋನಾ ಸೋಂಕು ತಗುಲಿದೆ ದೃಢಪಟ್ಟಿದೆ.

ಬುಧವಾರ ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ತೆರಳಿದ್ದ ಯಡಿಯೂರಪ್ಪನವರು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್- 19 ತಪಾಸಣೆ ನಡೆಸಿದ್ದು, ಅವರಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಾರ್ಥವಾಗಿ ತೆರೆದ ವಾಹನದಲ್ಲಿ ನಡೆಸಲಾಗುತ್ತಿದ್ದ ರೋಡ್ ಶೋ ಅವನ್ನು ಅರ್ಧಕ್ಕೆ ಮೊಟಕುಗೊಳಿಸಿ ನಗರದ ಹೋಟೆಲ್‌ಗೆ ಮರಳಿ ವಿಶ್ರಾಂತಿ ಜತೆಗೆ ಚಿಕಿತ್ಸೆ ಪಡೆದರು.