ವೈದ್ಯಕೀಯ ಸೇವೆಯ ಮಹತ್ವ ಕೊರೋನಾದಿಂದಾಗಿ ಜಗತ್ತಿಗೇ ಗೊತ್ತಾಗಿದೆ :ಲಕ್ಷ್ಮಿ ಹೆಬ್ಬಾಳಕರ್

ಬೆಂಗಳೂರು : ವೈದ್ಯಕೀಯ ಸೇವೆಯ ಮಹತ್ವ ಕೊರೋನಾದಿಂದಾಗಿ ಜಗತ್ತಿಗೇ ಗೊತ್ತಾಗಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.

promotions

ಬೆಂಗಳೂರಿನಲ್ಲಿ ಯುನೈಟೆಡ್‌ ಆಸ್ಪತ್ರೆ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.

promotions

ಉತ್ತರ ಕರ್ನಾಟಕದವರು ಬೆಂಗಳೂರಿಗೆ ಬಂದು ಆಸ್ಪತ್ರೆ ಆರಂಭಿಸುವುದು ಸುಲಭದ ಮಾತಲ್ಲ. ಅಂತಹ ಸಾಹಸಕ್ಕೆ ಡಾ ವಿಕ್ರಮ್‌ ಸಿದ್ದಾರೆಡ್ಡಿ ಮುಂದಾಗಿದ್ದಾರೆ. ಅವರಿಗೆ ಯಶಸಿಗಲಿ. ಅವರಿಂದಾಗಿ ಲಕ್ಷಾಂತರ ಕುಟುಂಬಗಳಿಗೆ ನೆಮ್ಮದಿ ಸಿಗುವಂತಾಗಲಿ ಎಂದು ಲಕ್ಷ್ಮಿ ಹೆಬ್ಬಾಳಕರ್ ಹಾರೈಸಿದರು.

ಕೊರೋನಾದ ಸಂದರ್ಭದಲ್ಲಿ ವೈದ್ಯಕೀಯ ಸೇವೆಯ ಮಹತ್ವ ಏನೆಂದು ಎಲ್ಲರಿಗೂ ಗೊತ್ತಾಗಿದೆ. ವೈದ್ಯಕೀಯ ಸಿಬ್ಬಂದಿ ದೇವರಿದ್ದಂತೆ. ತಾವು ಕಷ್ಟಪಟ್ಟರೂ ಜನರಲ್ಲಿ ನೆಮ್ಮದಿ ಕಾಣಲು ಬಯಸುತ್ತಾರೆ. ಅವರ ಸೇವೆಯನ್ನು ಎಷ್ಟು ಶ್ಲಾಘಿಸಿದರೂ ಕಡಿಮೆಯೇ ಎಂದು ಹೇಳಿದರು.

ಮುಗಳಖೋಡ-ಜಿಡಗಾ ಮಠದ ಪೀಠಾಧಿಪತಿಗಳಾದ ಶ್ರೀ ಷಡಕ್ಷರಿ ಶಿವಯೋಗಿ ಮುರುಘರಾಜೇಂದ್ರ ಮಹಾಸ್ವಾಮಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಕೆ ಸುಧಾಕರ್‌ ಇಂದು ಜಯನಗರದಲ್ಲಿ ನೂತನ ಆಸ್ಪತ್ರೆಯನ್ನು ಉದ್ಘಾಟಿಸಿದರು.

ಅಲ್ಲದೆ, ಕರೋನಾ ಲಸಿಕಾ ವಿತರಣಾ ಅಭಿಯಾನಕ್ಕೂ ಚಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಯುನೈಟೆಡ್‌ ಆಸ್ಪತ್ರೆಯ ಸಿಎಂಡಿ ಡಾ ವಿಕ್ರಮ್‌ ಸಿದ್ದಾರೆಡ್ಡಿ, ಮಾಜಿ ಕೇಂದ್ರ ಸಚಿವೆ ರಾಣಿ ಸತೀಶ್‌, ಮಾಜಿ ಸಚಿವೆ ಪಿಜಿಆರ್‌ ಸಿಂಧ್ಯಾ, ಶಾಸಕ ಪಿ ರಾಜೀವ, ಯುನೈಟೆಡ್‌ ಆಸ್ಪತ್ರೆಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್‌ ಮುರುಡಾ, ಆಸ್ಪತ್ರೆಯ ನಿರ್ದೇಶಕರಾದ ಡಾ. ವೀಣಾ ವಿಕ್ರಮ್‌ ಸಿದ್ಧಾರೆಡ್ಡಿ ಹಾಗೂ ಡಾ. ರಾಜೀವ್‌ ಬಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More Articles