ಯುವಕನ ಮೇಲೆ ಅತ್ಯಾಚಾರ ಮಾಡಿದ ಕಾಮುಕ
- 15 Jan 2024 , 3:40 AM
- Belagavi
- 152
ಅಥಣಿ : ಪುರುಷನೊಬ್ಬ ಯುವಕನ ಮೇಲೆಯೇ ಅತ್ಯಾಚಾರ ಎಸಗಿರುವ ವಿಲಕ್ಷಣ ಘಟನೆ ಅಥಣಿ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 24 ವರ್ಷದ ಯುವಕನ ಮೇಲೆ ಅಕ್ಟೋಬರ್ 5ರಂದು ಇನ್ನೋರ್ವ ಪುರುಷ ಅತ್ಯಾಚಾರ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಥಣಿಯ ಹೋಟೆಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುವ ಯುವಕನ ಮೇಲೆ ಅತ್ಯಾಚಾರ ಎಸಗಲಾಗಿದೆ. ಅತ್ಯಾಚಾರ ಎಸಗಿದ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ರಾಜು ಆಚಾರಟ್ಟಿ ಎಂಬುವರ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲಸ ಮುಗಿಸಿ ಮನೆಗೆ ತೆರಳಲು ಬಸ್ಗಾಗಿ ಯುವಕ ಕಾಯುತ್ತಿದ್ದ ವೇಳೆ ಬೈಕ್ ಮೇಲೆ ಬಂದ ಆರೋಪಿ ಡ್ರಾಪ್ ಕೊಡುವುದಾಗಿ ಹೇಳಿ ಗಾಡಿ ಮೇಲೆ ಹತ್ತಿಸಿಕೊಂಡಿದ್ದಾರೆ. ಮಾರ್ಗ ಮಧ್ಯೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಸಾಲದೆಂಬಂತೆ ವಿಚಾರ ಯಾರಿಗೂ ಹೇಳಬಾರದೆಂದು ಜೀವ ಬೆದರಿಕೆ ಹಾಕಿದ್ದಾನೆ. ಸಂತ್ರಸ್ತ ಯುವಕ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿ ರಾಜು ಆಚಾರಟ್ಟಿಯನ್ನು ಬಂಧಿಸಿದ್ದಾರೆ.











