
ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳಿಗೆ ಲೆಕ್ಕಪರಿಶೋಧಕರ ನೇಮಕಾತಿ ಮಾಹಿತಿ ಸಲ್ಲಿಸಲು ಸೂಚನೆ
- 14 Jan 2024 , 8:45 PM
- Belagavi
- 357
ಬೆಳಗಾವಿ: ಸಹಕಾರ ಸಂಘಗಳ ಲೆಕ್ಕ ಪರಿಶೋಧನೆಗಾಗಿ ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಲೆಕ್ಕಪರಿಶೋಧಕರ/ಲೆಕ್ಕಪರಿಶೋಧನಾ ಫರ್ಮಿನ ನೇಮಕಾತಿ ಬಗ್ಗೆ ವಾರ್ಷಿಕ ಮಹಾಸಭೆ ಜರುಗಿದ ದಿನಾಂಕದಿಂದ 07 ದಿನಗಳೊಳಗಾಗಿ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಗೆ ಮಾಹಿತಿ ಸಲ್ಲಿಸಬೇಕು ಎಂದು ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಕಲಂ 63(I) ರಂತೆ ಸನ್ 2021-22 ನೇ ಸಾಲಿನ ಲೆಕ್ಕಪರಿಶೋಧನೆ ಕುರಿತು ಸಹಕಾರ ನಿಯಮಗಳು 1960 ನಿಯಮ 29- ಬಿ(8) ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ನಿಯಮಗಳು 2004 ನಿಯಮ 8-ಬಿ (8) ರನ್ವಯ ಯಾವುದೇ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರು ವಾರ್ಷಿಕ ಮಹಾ ಸಭೆಯಲ್ಲಿ ಲೆಕ್ಕಪರಿಶೋಧಕರ ಅಥವಾ ಲೆಕ್ಕಪರಿಶೋಧನಾ ಫರ್ಮಿನ ನೇಮಕ ಮಾಡಿಕೊಂಡ ಬಗ್ಗೆ ವಾರ್ಷಿಕ ಮಹಾಸಭೆಯು ಜರುಗಿದ ದಿನಾಂಕದಿಂದ 7 ದಿನಗಳೊಳಗಾಗಿ ಲೆಕ್ಕಪರಿಶೋಧಕರಿಗೆ/ಲೆಕ್ಕಪರಿಶೋಧನಾ ಸರ್ಮಿಗೆ ಮತ್ತು ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಿಗೆ ಮಾಹಿತಿ ತಿಳಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ.

ಆದ್ದರಿಂದ, ಸಹಕಾರ ಸಂಘ/ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾ ಸಭೆಯಲ್ಲಿ ಲೆಕ್ಕಪರಿಶೋಧಕರನ್ನು/ಲೆಕ್ಕಪರಿಶೋಧನಾ ಫರ್ಮನ್ನು ನೇಮಕಾತಿ ಮಾಡಿಕೊಂಡಿರುವ ಬಗ್ಗೆ ಮಾಹಿತಿಯನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಅಧ್ಯಕ್ಷರ ರುಜುವಿನೊಂದಿಗೆ ವಾರ್ಷಿಕ ಮಹಾಸಭೆಯ ನಡವಳಿ ಯಥಾ ನಕಲು ಪ್ರತಿಯನ್ನು ಜಂಟಿ ನಿರ್ದೇಶಕರ ಕಛೇರಿ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಬೆಳಗಾವಿ ಜಿಲ್ಲೆ ಬೆಳಗಾವಿ ಸುವರ್ಣ ವಿಧಾನ ಸೌಧ ಕೊಠಡಿ ಸಂಖ್ಯೆ 16, 17,17ಎ, ದಕ್ಷಿಣ ದ್ವಾರ, ಬೆಳಗಾವಿ 590020 ಈ ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ನಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08312432579ಹಾಗೂ ವೆಬ್ ಸೈಟ್ ವಿಳಾಸ ddca-belgaum-ka@nic.in ಗೆ ಸಂಪರ್ಕಿಸಬಹುದು ಎಂದು ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.