ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು; ಸಿಬಿಐ ವಿಶೇಷ ಕೋರ್ಟ್ ತೀರ್ಪು

  • 15 Jan 2024 , 12:23 AM
  • Delhi
  • 145

ನವದೆಹಲಿ: ಸುಮಾರು 28 ವರ್ಷಗಳ ಹಿಂದಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಬಗ್ಗೆ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ. 1992ರ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳು ತೀರ್ಪಿನ ದಿನ ಖುದ್ದು ಹಾಜರು ಇರುವಂತೆ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ.ಯಾದವ್‌ ಸೆಪ್ಟೆಂಬರ್‌ 16ರಂದೇ ನಿರ್ದೇಶನ ನೀಡಿದ್ದರು.

promotions

ಆದರೆ ಇಂದು ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿದ್ದು ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ , ಆಕಸ್ಮಿಕವಾಗಿ ನಡೆದಿರುವಂತದ್ದು , ಆರೋಪ ಸಾಬೀತು ಪಡಿಸಲು ಸರಿಯಾದ ಸಾಕ್ಷ್ಯಗಳು ಇಲ್ಲ. ಎಲ್ಲಾ 32 ಆರೋಪಿಗಳು ನಿರ್ದೋಷಿಗಳು ಎಂದು ಆದೇಶ ಹೊರಡಿಸಿದೆ.

promotions

ರಾಜಕೀಯ ಭೀಷ್ಮ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ , ಬಿಜೆಪಿಯ ಹಿರಿಯ ನಾಯಕರಾದ ಮುರಳಿ ಮನೋಹರ ಜೋಶಿ , ಕಲ್ಯಾಣ್ ಸಿಂಗ್ , ಉಮಾ ಭಾರತಿ , ವಿನಯ್‌ ಕಟಿಯಾರ್ ಸೇರಿದಂತೆ 32 ಆರೋಪಿಗಳು ನಿರ್ದೋಷಿಗಳು ಎಂದು ಲಕ್ನೋದದ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದೆ.

Read More Articles