ಸರಳ ಆಚರಣೆಗೆ ಸಿದ್ಧವಾಗುತ್ತಿದೆ ಹಂಪಿ ಉತ್ಸವ
- 15 Jan 2024 , 3:03 AM
- Belagavi
- 279
ಬಳ್ಳಾರಿ: ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವ ಪ್ರತಿ ವರ್ಷ ಮೂರು ದಿನಗಳ ಕಾಲ ನಡೆಯುತ್ತಿತ್ತು. ಆದರೆ ಈ ಬಾರಿ ಕೋವಿಡ್ ಹಿನ್ನೆಲೆ ನ.13 ರಂದು ಒಂದು ದಿನ ಸಾಂಕೇತಿಕವಾಗಿ ಸರಳವಾಗಿ ಹಂಪಿ ಉತ್ಸವ ನಡೆಸಲು ಸರ್ಕಾರ ತೀರ್ಮಾನಿಸಲಾಗಿದೆ. ಹಂಪಿಯ ಉದ್ದಾನ ವೀರಭದ್ರೇಶ್ವರ ದೇವಸ್ಥಾನದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ಜನಪದ ಕಲಾತಂಡಗಳ ಶೋಭಾಯಾತ್ರೆ ನಡೆಯಲಿದ್ದು, ಶೋಭಾಯಾತ್ರೆ ನಂತರ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುವ ತುಂಗಾಭದ್ರಾ ನದಿ ದಡದಲ್ಲಿ ತುಂಗಾ ಆರತಿ ನಡೆಯಲಿದೆ. ಈ ಬಾರಿ ವೇದಿಕೆ ಕಾರ್ಯಕ್ರಮ ಇರುವುದಿಲ್ಲ ಎಂದು ಅರಣ್ಯ ಹಾಗೂ ಪರಿಸರ ಸಚಿವ ಆನಂದ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.












