ತಿರುಪತಿ ದೇವಸ್ಥಾನಕ್ಕೆ ತೆರೆಳಿದ್ದ ಬೆಳಗಾವಿಯ ಭಕ್ತರ ಭೀಕರ ಅಫಘಾತ

ಆಂಧ್ರಪ್ರದೇಶದ : ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಂದ್ರಪ್ರದೇಶದ ಅಣ್ಣಮಯ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

promotions

ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು, ಮೃತರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

promotions

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ತೆರಳುತ್ತಿದ್ದ ಬೆಳಗಾವಿ ಮೂಲದ 16 ಭಕ್ತರು ಕ್ರೂಸರ್ ವಾಹನದಲ್ಲಿ ಕಡಪದಿಂದ ಚಿತ್ತೂರಿಗೆ ಪ್ರಯಾಣ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈವರೆಗೂ ಮೃತರ ಗುರುತು ಪತ್ತೆಯಾಗಿಲ್ಲ.

ಅಪಘಾತದಲ್ಲಿ ಗಾಯಗೊಂಡವರನ್ನು ತಿರುಪತಿ ರೂವಾ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಎಂದು ಪೊಲೀಸ್ ಅಧಿಕಾರಿ ನಾಗಬಾಬು ತಿಳಿಸಿದ್ದಾರೆ.

Read More Articles