5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲು ಗ್ರೀನ ಸಿಗ್ನಲ್ ಕೊಟ್ಟ ಸಿಎಂ .
- By:Krishna Shinde
- 31 May 23 05:12 pm

ಬೆಂಗಳೂರು :ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಪ್ರಮುಖ 5 ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿಗಳು ಸರ್ಕಾರದ ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದರು.
ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದ ಎಲ್ಲಾ 5 ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಿದ್ದೇವೆ,ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಅವುಗಳನ್ನು ಜಾರಿಗೆ ಕೊಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.