
ವಿರಪನಕೊಪ್ಪ ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ಚಾಲನೆ
- 14 Jan 2024 , 10:52 PM
- Belagavi
- 134
ಬೆಳಗಾವಿ: ಗ್ರಾಮೀಣ ಕ್ಷೇತ್ರದ ವಿರಪನಕೊಪ್ಪ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ 53 ಲಕ್ಷ ರೂ. ಮಂಜೂರು ಮಾಡಿಸಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಇಂದು ರಸ್ತೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

"ಚುನಾವಣೆಯ ಪೂರ್ವದಲ್ಲಿ ಕೊಟ್ಟ ಯಾವ ಭರವಸೆಯನ್ನೂ ಹುಸಿಗೊಳಿಸದೇ ಕೊಟ್ಟ ಮಾತಿಗೆ ತಕ್ಕಂತೆ ನಡೆದು ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಅಭಿವೃದ್ಧಿಯ ಸ್ಪರ್ಶ ನೀಡಿದ್ದೇನೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದ ಸದಾಕಾಲವೂ ನನ್ನ ಮೇಲಿರಲಿ," ಎಂದು ಅವರು ಜನತೆಯಲ್ಲಿ ಕೋರಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸೂರ್ಯಗೌಡ ಪಾಟೀಲ, ಬಸನಗೌಡ ಪಾಟೀಲ, ಸಂಗನಗೌಡ ಪಾಟೀಲ, ಪ್ರವೀಣಗೌಡ ಪಾಟೀಲ, ಫಕೀರಗೌಡ ಪಾಟೀಲ, ಸಿದ್ದಪ್ಪ ಮಾದಿಗರ, ಬಸವಂತ ಅದೃಷಿ, ಶಂಕರಗೌಡ ಪಾಟೀಲ, ರಾಜು ಹಣಬರ, ವಿಠ್ಠಲ ಅಮೃಪುರ, ರಾಘವೇಂದ್ರ ಮಾದಿಗರ, ಮಹಾಂತೇಶ ಹಿರೇಮಠ, ರಾಜು ಅಮೃಪುರ ಹಾಗೂ ಮುಂತಾದವರು ಉಪಸ್ಥಿತರಿದ್ದರು.