ರಾಜ್ಯ ಬಿಜೆಪಿಯಲ್ಲಿ ಹೊಸ ಟ್ವಿಸ್ಟ್ ನೀಡಿದ ಈಶ್ವರಪ್ಪ

ಬೆಂಗಳೂರು :ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ಶಿವಮೊಗ್ಗದ ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

promotions

ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ ಎಂದು ಕೆ ಎಸ್ ಈಶ್ವರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

promotions

ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್‌ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಹೇಳಿದ್ದಾರೆ.

Read More Articles