ಇಂದಿನಿಂದ ಗೃಹಜ್ಯೋತಿ ಯೋಜನೆ ಪ್ರಾರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ
- Shivaraj Bandigi
- 15 Jan 2024 , 1:50 AM
- Bengaluru
- 134
ಬೆಂಗಳೂರು : ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಗೃಹಜ್ಯೋತಿ ಯೋಜನೆಯ ಬಿಲ್ಲು ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು.










