ಒಡಿಶಾ ರೈಲು ಅಪಘಾತ :ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ-ಸಿಎಂ .

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ  200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡ ಕಾರಣ ಇಡೀ ಭಾರತ ದುಃಖದಿಂದ ಕೂಡಿದೆ.

ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

Latest Articles