ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಖಲಿಸ್ತಾನ್ ಪರ ಘೋಷನೆ .

ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಖಲಿಸ್ತಾನ್ ಬೆಂಬಲಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಖಲಿಸ್ತಾನ್ ಬೆಂಬಲಿಗರು ರಾಹುಲ್ ಗಾಂಧಿ ಅವರ  ಕಾರ್ಯಕ್ರಮಕ್ಕೆ ಅಡ್ಡಿಪಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. 

ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಸಂದರ್ಭದಲ್ಲಿ ಖಲಿಸ್ತಾನ್ ಬೆಂಬಲಿಗರು "ಖಲಿಸ್ತಾನ್ ಜಿಂದಾಬಾದ್" ಘೋಷಣೆಗಳನ್ನು ಕೂಗಿದ್ದಾರೆ. 

ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದವರು ಸಿಖ್ ಫಾರ್ ಜಸ್ಟೀಸ್ ಅಥವಾ ಎಸ್‌ಎಫ್‌ಜೆ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ವರದಿಯಾಗಿದೆ.  

Latest Articles