75 ಲಕ್ಷ ರೂ, ವೆಚ್ಚದಲ್ಲಿ ಹಿಂಡಲಗಾ ಗ್ರಾಮದ ರಸ್ತೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ವಿಜಯನಗರ ಸ್ವರಾಜ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯ ಮುಖ್ಯ ರಸ್ತೆಯನ್ನು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ 75 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಲಾಗಿದ್ದು, ಬುಧವಾರ ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.

promotions

ಈ ಸಮಯದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ವಿಠ್ಠಲ ಶಂಕರ ದೇಸಾಯಿ, ಅಶೋಕ ಕಾಂಬಳೆ, ರಾಹುಲ್ ಉರನಕರ್, ಪರುಶರಾಮ ಕುಡಚಿಕರ್, ಪ್ರವೀಣ ಪಾಟೀಲ, ಗಜಾನನ ಬಾಂಡೇಕರ್, ಸೀಮಾ ದೇವಕರ್, ನಿತಿನ್ ಸಿಂಗ್ ರಜಪೂತ್, ಹಿಂಡಲಗಾ ಲಕ್ಷ್ಮೀ ದೇವಿ ಯಾತ್ರೋತ್ಸವ ಸಂಘದ ಎಲ್ಲ ಸದಸ್ಯರು ಹಾಗೂ ಮುಂತಾದವರು ಉಪಸ್ಥಿತರಿದ್ದರು.

promotions

Read More Articles