ಗಗನಕ್ಕೆ ಏರಿದ ಟೊಮ್ಯಾಟೊ , ಹಸಿ ಮೆಣಸಿನಕಾಯಿ ಬೆಲೆ
- Shivaraj Bandigi
- 10 Jan 2024 , 7:43 AM
- Belagavi
- 241
ಅಥಣಿ : ಒಂದೆಡೆ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ಮಳೆರಾಯನ ಆಗಮನಕ್ಕಾಗಿ ರೈತರು ಆಕಾಶದತ್ತ ಮುಖ ಮಾಡಿ ಕುಳಿತಿದ್ದಾರೆ. ಮತ್ತೊಂದೆಡೆ ಟೊಮೆಟೋ, ಮೆಣಸಿನಕಾಯಿ ಬೆಲೆ ಶತಕದ ಗಡಿ ದಾಟಿರುವುದು ಜನಸಾಮಾನ್ಯರನ್ನು ಚಿಂತೆಗೀಡು ಮಾಡಿದೆ.

ಹೌದು ಜುಲೈ ತಿಂಗಳ ಮೊದಲ ವಾರ ಕಳೆಯುತ್ತಾ ಬಂದರೂ ಅಥಣಿ ಹಾಗೂ ಕಾಗವಾಡ ಸಾಧಾರಣ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿ ಉಪಯೋಗವಾಗುತ್ತಿಲ್ಲ. ಮಳೆ ಕೊರತೆ ಹಿನ್ನೆಲೆ ಬಹುತೇಕ ರೈತರು ಬಿತ್ತನೆ ಮಾಡದೇ ಕೈ ಕೈ ಕಟ್ಟಿ ಕುಳಿತುಕೊಳ್ಳುವಂತಾಗಿದೆ. ಇನ್ನು ಇದಕ್ಕೂ ಮೊದಲು ಬೆಳೆದಿದ್ದ ಟೊಮೆಟೋ, ಮೆಣಸಿನಕಾಯಿ ಸೇರಿ ಇತರೆ ತರಕಾರಿ ಬೆಳೆಗಳು ಸಮರ್ಪಕ ಮಳೆಯಾಗದೇ ಇರುವುದರಿಂದ ಇಳುವರಿ ಕಡಿಮೆಯಾಗಿದೆ. ಪರಿಣಾಮ ಬೆಳಗಾವಿಯಲ್ಲಿ ಟೊಮೆಟೋ ಮತ್ತು ಹಸಿ ಮೆಣಸಿನಕಾಯಿ ಬೆಲೆ ನೂರು ರೂಪಾಯಿಗೆ ಮಾರಾಟವಾಗುತ್ತಿವೆ.

ಟೊಮೆಟೋ ಮತ್ತು ಮೆಣಸಿನಕಾಯಿ ದಿನನಿತ್ಯ ಎಲ್ಲರ ಮನೆಯಲ್ಲೂ ಬಳಸುವ ಉತ್ಪನ್ನಗಳು. ಆದರೆ ಅಗತ್ಯಕ್ಕಿಂತ ಕಡಿಮೆ ಉತ್ಪನ್ನ ಮಾರುಕಟ್ಟೆಗೆ ಬಂದಿರುವುದರಿಂದ ಇವುಗಳ ಬೆಲೆ ಗಗನಕ್ಕೇರಿವೆ.
ವರದಿಗಾರ : ರಾಹುಲ್










