ಹುಕ್ಕೇರಿ ಶ್ರೀಗಳ ಆಶೀರ್ವಾದ ಪಡೆದ ವಿಜಯೇಂದ್ರ

ಬೆಳಗಾವಿ :

promotions

ಬೆಳಗಾವಿ ನಗರದಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭೇಟಿ ನೀಡಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

promotions

ಇದೇ ಸಂದರ್ಭದಲ್ಲಿ ವಿಜಯೇಂದ್ರ ಅವರು ಮಾತನಾಡಿ, ಹುಕ್ಕೇರಿ ದಸರಾ ಉತ್ಸವಕ್ಕೆ ಬಂದಾಗ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ನೀನು ರಾಜ್ಯಾಧ್ಯಕ್ಷನಾಗಿಯೇ ಬೆಳಗಾವಿಗೆ ಬರುತ್ತಿಯಾ ಎಂದು ಆಶೀರ್ವಾದ ಮಾಡಿದ್ದರು. ಅದರ ಫಲವಾಗಿ ಇಂದು ನಾನು ರಾಜ್ಯಾಧ್ಯಕ್ಷನಾಗಿದ್ದೇನೆ. ಎಲ್ಲರ ಆಶೀರ್ವಾದ ನನ್ನ ಮೇಲೆ ಇದೆ. ಪಕ್ಷದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕಾರ್ಯವನ್ನು ನಿರ್ವಹಿಸುತ್ತೇನೆ ಎಂದರು.

ಬೆಳಗಾವಿಯ ನಾಗನೂರು ರುದ್ರಾಕ್ಷಿಮಠಕ್ಕೆ ಭೇಟಿ ನೀಡಿ ಡಾ. ಅಲ್ಲಮಪ್ರಭು ಸ್ವಾಮೀಜಿ ಹಾಗೂ ಕಾರಂಜಿಮಠದ ಗುರುಸಿದ್ದ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದನು ಸ್ಮರಿಸಿದರು.

ಬಿಜೆಪಿ ನಗರ ಘಟಕದ ಜಿಲ್ಲಾಧ್ಯಕ್ಷ ಅನಿಲ್ ಬೆನಕೆ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಜೀರಲಿ, ಮುಕ್ತಾರ ಹುಸೇನ್ ಪಠಾಣ, ನಿವೃತ್ತ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ಮಹಾಂತೇಶ ಒಕ್ಕುಂದ, ವೀರುಪಾಕ್ಷಯ್ಯ ನೀರಲಗಿಮಠ, ಚಂದ್ರಶೇಖರ ಸವಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read More Articles