ನೂತನ ಐಜಿಪಿಯಾಗಿ ವಿಕಾಸ್ ಕುಮಾರ ಅಧಿಕಾರ ಸ್ವೀಕಾರ

ಬೆಳಗಾವಿ: ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕರಾಗಿ ವಿಕಾಸ್ ಕುಮಾರ್ ವಿಕಾಸ್ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.

promotions

ಐಜಿಪಿಯಾಗಿದ್ದ ಎನ್.ಸತೀಶ್ ಕುಮಾರ್ ಅವರ ನಿರ್ಗಮನದಿಂದ ತೆರವಾದ ಸ್ಥಾನಕ್ಕೆ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರಾಗಿದ್ದ ರಮಣ ಗುಪ್ತ ಅವರನ್ನು ನೇಮಕ ಮಾಡಲಾಗಿತ್ತು. 

promotions

ಒಂದೇ ದಿನದಲ್ಲಿ ಈ ಆದೇಶವನ್ನು ಮಾರ್ಪಡಿಸಿ ಬಳ್ಳಾರಿ ವಲಯ ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. 

ಈ ಆದೇಶ ಬಂದ ಮೂರನೇ ದಿನವೇ ಮತ್ತೊಂದು ಆದೇಶ ಹೊರಡಿಸಿದ ಸರ್ಕಾರ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಐಜಿಪಿ ಯನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಉತ್ತರ ವಲಯದ ನೂತನ ಐಜಿಪಿಯಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

Read More Articles