ಕೆ. ಎಸ್ ಆರ್ ಟಿ ಸಿ ಸಿಬ್ಬಂದಿಗಳಿಗೆ ಸಿಹಿ ಸುದ್ದಿ : ರೂ.1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆ ಜಾರಿ ಮಾಡಿದ ಸರ್ಕಾರ

  • 15 Jan 2024 , 3:09 AM
  • Bengaluru
  • 132

ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ  ಬಾರಿಗೆ ಕೆ. ಎಸ್ ಆರ್ ಟಿ ಸಿ ಸಿಬ್ಬಂದಿಗಳಿಗೆ ರೂ.1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿ ಮಾಡಲಾಗಿದೆ .ಈಗಾಗಲೇ ರೂ 50 ಲಕ್ಷ ವಿಮೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾರವರಿಂದ ಹಾಗೂ ಇಂದು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ರವರಿಂದ ಮಾಡಿಕೊಂಡ ಒಡಂಬಡಿಕೆಯ ರೂ.50 ಲಕ್ಷ ಸೇರಿ, ಒಟ್ಟು ರೂ.1 ಕೋಟಿ ಅಪಘಾತ ವಿಮೆಯಾಗಿದೆ.

ನಿಗಮದ ಸಿಬ್ಬಂದಿಗಳು ಅವಘಾತದಲ್ಲಿ (ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ ಅಥವಾ ಶಾಶ್ವತ / ತಾತ್ಕಾಲಿಕ ಅಂಗವೈಕಲ್ಯಕ್ಕೆ ತುತ್ತಾದರೆ ಅವರಿಗೆ ರೂ. 50 ಲಕ್ಷಗಳ ಪರಿಹಾರ ನೀಡುವ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ನಿಗಮವು ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಜಾರಿಗೆ ತಂದಿದೆ.

ಇದರ ಮುಂದುವರಿದ ಭಾಗವಾಗಿ, ಇಂದು ನಿಗಮವು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿ. ರವರೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಅದರಂತೆ ಸಿಬ್ಬಂದಿಗಳಿಗೆ ರೂ.50 ಲಕ್ಷದವರೆಗೆ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ಈಗಾಗಲೇ ಜಾರಿಗೆ ತಂದಿದೆ.

ಈ ವಿಮಾ ಯೋಜನೆಗೆ ಸಿಬ್ಬಂದಿಗಳು ರೂ.62.50 + ಜಿ.ಎಸ್.ಟಿ ಸೇರಿದಂತೆ (ವಾರ್ಷಿಕ ರೂ.885/- ಪ್ರೀಮಿಯಂ) ಪಾವತಿಸಬೇಕಾಗುತ್ತದೆ.

ಅಪಘಾತದಲ್ಲಿ ಸಿಬ್ಬಂದಿಗಳು ಶಾಶ್ವತವಾಗಿ ಪೂರ್ಣ ಅಂಗ ವೈಕಲ್ಯಕ್ಕೆ ತುತ್ತಾದಲ್ಲಿ ಸಹ ರೂ. 50 ಲಕ್ಷಗಳ ವಿಮಾ ಪರಿಹಾರ ದೊರೆಯಲಿದೆ.

ಈ ವಿಮಾ ಯೋಜನೆಯಲ್ಲಿ ಮತ್ತೊಂದು ಉಪಯಕ್ತ ಕ್ರಮವೆಂದರೆ ಕರ್ತವ್ಯ ನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ (On duty and Off duty) ಸಮಯದಲ್ಲೂ ಆಗುವ ವೈಯಕ್ತಿಕ ಅಪಘಾತಗಳಿಗೂ ಅನ್ವಯವಾಗುತ್ತದೆ.

ಒಂದು ವೇಳೆ ಸಿಬ್ಬಂದಿಯು ಅಪಘಾತಕ್ಕೆ ಒಳಗಾಗಿ ತಾತ್ಕಾಲಿಕ ಅಂಗವೈಕಲ್ಯ ಉಂಟಾಗಿ, ತನ್ನ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅಸಮರ್ಥನಾದ ಪಕ್ಷದಲ್ಲಿ, ಆತನು ಚೇತರಿಸಿಕೊಳ್ಳುವವರೆಗೆ, ಅವನಿಗೆ ವಿಮಾ ಮಾಡಲಾದ ರೂ.50 ಲಕ್ಷ ಮೊತ್ತದ ಶೇಕಡಾ ಒಂದರಷ್ಟು ಮೊತ್ತವನ್ನು ಪ್ರತಿವಾರ ರೂ.5000 ಕ್ಕೆ ಹೆಚ್ಚದಂತೆ ಅಥವಾ ಅವರ ಮಾಸಿಕ ಸಂಬಳದ ಶೇಕಡಾ 25ರಷ್ಟನ್ನು,ಯಾವುದು ಕಡಿಮೆಯೋ ಅದನ್ನು ಸಿಬ್ಬಂದಿಗೆ ವಿಮಾ ಸಂಸ್ಥೆಯು ನೀಡುವುದು.

Read All News