ವ್ಯಾಪಕ ಮಳೆ: ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ನಿತೀಶ ಪಾಟೀಲ

ಬೆಳಗಾವಿ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ  ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ ಪಾಟೀಲ ತಿಳಿಸಿದ್ದಾರೆ.

promotions

ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

promotions

Read More Articles